ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನದ ಸಿದ್ಧತೆ ಮಾಹಿತಿ ನೀಡಿಲ್ಲ: ಸಂಸದ ಬೇಸರ

Last Updated 26 ಜನವರಿ 2020, 19:47 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ‘ಕಲಬುರ್ಗಿಯಲ್ಲಿ 3 ದಶಕದ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಮತ್ತು ಚಟುವಟಿಕೆ ನಡೆದಿವೆ. ಆದರೆ, ನನಗೆ ಈವರೆಗೆ ಯಾರೊಬ್ಬರೂ ಮಾಹಿತಿ ನೀಡಿಲ್ಲ’ ಎಂದು ಸಂಸದ ಡಾ. ಉಮೇಶ ಜಾಧವ ತಿಳಿಸಿದರು.

ಇಲ್ಲಿನ ಚಂದಾಪುರದ ತಮ್ಮನಿವಾಸದಲ್ಲಿ ಭಾನುವಾರ ಸಮ್ಮೇಳನದ ಭಿತ್ತಿಪತ್ರ ಬಿಡುಗಡೆ ಮಾಡಿದ ಬಳಿಕ ‘‍ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಸಮ್ಮೇಳನದ ಸಿದ್ಧತೆ ಸಂದರ್ಭದಲ್ಲಿ ನಾನು ಜಿಲ್ಲಾಧಿಕಾರಿ ಅವರನ್ನು ಹಲವು ಬಾರಿ ಭೇಟಿಯಾಗಿದ್ದೇನೆ. ಆದರೆ, ಅವರು ಸಮ್ಮೇಳನದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸಭೆಗಳಿಗೆ ಮೌಖಿಕವಾಗಿ ಆಹ್ವಾನಿಸಿಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ಮತ್ತು ಸಾಹಿತಿಗಳೂ ನನ್ನನ್ನು ಸಂಪರ್ಕಿಸಿಲ್ಲ’ ಎಂದರು.

‘ಸಮ್ಮೇಳನದಲ್ಲಿ ರಾಜಕೀಯ ಇರಬಾರದು. ರಾಜಕೀಯ ಮಾಡಲು ಸಾಕಷ್ಟು ಕ್ಷೇತ್ರಗಳಿವೆ. ನಾಡು ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ಚಿಂತನ ಮಂಥನ ನಡೆಯುವ ಸಮ್ಮೇಳನದ ಬಗ್ಗೆ ಉದಾಸೀನ ಮಾಡುವ ಪ್ರಶ್ನೆಯೇ ಇಲ್ಲ. ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT