ಸೋಮವಾರ, ನವೆಂಬರ್ 18, 2019
24 °C

ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ; ಬಿ.ಎಸ್ ಯಡಿಯೂರಪ್ಪ

Published:
Updated:

ಬೆಳಗಾವಿ: ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ರಾತ್ರಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಇದಲ್ಲದೇ, ಭಾರಿ ಮಳೆಯಿಂದ ದೊಡ್ಡ ಅನಾಹುತವೇ ಆಗಿದೆ. ಸಾವಿರಾರು ಜನರಿಗೆ ತೊಂದರೆಯಾಗಿದೆ. ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ, ಹಣವನ್ನು ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಬಂದಿದೆ’ ಎಂದರು.

‘ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಉಪಚುನಾವಣೆ ನಂತರವೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಅಸಮಾಧಾನ ಇಲ್ಲ:

‘ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನವಿಲ್ಲ. ಹಣೆಬರಹದಲ್ಲಿ ಬರೆದಿದ್ದರೆ ಸಚಿವನಾಗುವೆ. ಬಿಎಸ್‌ವೈ ಹಾಗೂ ಪಕ್ಷದ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯವಿಲ್ಲ’ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.

‘ಬಿಎಸ್‌ವೈ ನಮ್ಮ ನಾಯಕ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ನಾನಲ್ಲ. ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದರು.

ಪ್ರತಿಕ್ರಿಯಿಸಿ (+)