ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಲಾಕ್‌ಡೌನ್ ಇಲ್ಲ: ಸಚಿವ ಆರ್.ಅಶೋಕ್

Last Updated 26 ಜೂನ್ 2020, 11:57 IST
ಅಕ್ಷರ ಗಾತ್ರ

ಬೆಂಗಳೂರು: ಮತ್ತೆ ಲಾಕ್‌ಡೌನ್ ಇಲ್ಲ. ಸರ್ಕಾರ ಆ ಮೂಡ್‌ನಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದ್ದಾರೆ.

ಬೆಡ್‌ಗಳ‌ ಅಲಾಟ್‌ಮೆಂಟ್‌ಗಾಗಿ ತುಷಾರ್‌ ಗಿರಿನಾಥ್‌ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಕೋವಿಡ್‌ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಮಸ್ಯೆ ಆಗದಂತೆ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಆರ್‌.ಅಶೋಕ ತಿಳಿಸಿದ್ದಾರೆ.

ಶಾಸಕರ ಸಭೆಯ ಬಳಿಕ ಹೇಳಿಕೆ ನೀಡಿರುವ ಅವರು, ಇಲ್ಲಿಯವರೆಗೆ 5.53,325 ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ಪ್ರತಿದಿನ 4,000 ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು 7,500 ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಒಂದು ವಾರದಲ್ಲಿ ಹೆಚ್ಚುವರಿಯಾಗಿ 7300 ಬೆಡ್‌ಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಕಂಠೀರವ ಸ್ಟೇಡಿಯಂ, ಲೆಗೆಸಿ ಸೆಂಟರ್‌, ಇಂಟರ್‌ನ್ಯಾಷನಲ್‌ ಎಕ್ಸಿಬಿಷನ್‌ ಸೆಂಟರ್‌ಗಳಲ್ಲಿ ಚಿಕಿತ್ಸೆಗಾಗಿ ಬೆಡ್‌ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಲಭ್ಯತೆ ಬಗ್ಗೆ ನೀಲ ನಕಾಶೆ ತಯಾರಿಸಲಾಗುತ್ತದೆ. ಕೋವಿಡ್‌ ಪಾಸಿಟಿವ್‌ ಬೆಳಕಿಗೆ ಬಂದ ತಕ್ಷಣವೇ, ಆತನಿಗೆ ಎಲ್ಲಿ ಕಳುಹಿಸಬೇಕು ಎಂಬುದನ್ನು ಬೆಡ್‌ ಅಲಾಟ್‌ಮೆಂಟ್‌ ಕಮಿಟಿ ನಿರ್ಧರಿಸುತ್ತದೆ. ರೋಗಿ ಚಿಕಿತ್ಸೆಗೆ ಅಲೆದಾಡುವ ಸ್ಥಿತಿ ನಿರ್ಮಿಸುವುದಿಲ್ಲ ಎಂದು ಅಶೋಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT