ಶುಕ್ರವಾರ, ಫೆಬ್ರವರಿ 28, 2020
19 °C

ಈಗಿನ ರಾಜಕಾರಣಿಗಳಲ್ಲಿ ನೈತಿಕತೆಯೇ ಇಲ್ಲ: ಬಸವರಾಜ ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಸಚಿವರಾಗಬೇಕು ಎನ್ನುವ ಕಾರಣಕ್ಕಾಗಿಯೇ ರಾಜಕಾರಣಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಈಗಿನ ರಾಜಕಾರಣಿಗಳಲ್ಲಿ ನೈತಿಕತೆಯೇ ಇಲ್ಲವಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಸಚಿವ ಸಂಪುಟ ವಿಸ್ತರಣೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಂತಿ ಮೇಲೆ ನಡೆವಂತಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು, ಯಾರನ್ನು ಕೈ ಬಿಡಬೇಕು ಎಂಬುದೇ ತಲೆನೋವಾಗಿದೆ’ ಎಂದರು.

‘ಎಲ್ಲರಿಗೂ ಸಚಿವ ಸ್ಥಾನ, ಎರಡೆರಡು ಹುದ್ದೆ ಬೇಕು. ಸಚಿವ ಸ್ಥಾನ ದೊರೆಯದಿದ್ದಲ್ಲಿ ಪಕ್ಷಾಂತರ ಮಾಡುತ್ತಾರೆ. ಇಲ್ಲವೇ, ರಾಜೀನಾಮೆಗೆ ಮುಂದಾಗುತ್ತಾರೆ. ಅಂಥವರನ್ನು ಸಮಾಧಾನಪಡಿಸುವುದರಲ್ಲೇ ಯಡಿಯೂರಪ್ಪ ಸಮಯ ಹಾಳಾಗುತ್ತಿದೆ. ಸದ್ಯದ ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ರಾಜಕಾರಣಕ್ಕೆ ಭವಿಷ್ಯವಿಲ್ಲ ಎನ್ನುವಂತಾಗಿದೆ’ ಎಂದು ಹೇಳಿದರು.

‘ಸಂಪೂರ್ಣ ಬಹುಮತ ಪಡೆದ ಪಕ್ಷ ಮಾತ್ರ ಆಡಳಿತ ನಡೆಸಬೇಕು. ಸಮ್ಮಿಶ್ರ ಸರ್ಕಾರಕ್ಕೆ ಮುಂದಾದರೆ ಯಾವ ಕ್ಷಣದಲ್ಲಾದರೂ ಪತನವಾಗಬಹುದು. ಜೆಡಿಎಸ್‌–ಕಾಂಗ್ರೆಸ್‌, ಜೆಡಿಎಸ್‌–ಬಿಜೆಪಿ ಸೇರಿ ಸರ್ಕಾರ ನಡೆಸಿದಾಗಲೂ, ಪೂರ್ಣಾವಧಿ ಆಡಳಿತ ನಡೆಸಲು ಸಾಧ್ಯವಾಗಿಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು