ಸೋಮವಾರ, ಮಾರ್ಚ್ 1, 2021
24 °C
‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಸಂವಾದ

ಬಡ್ತಿ ಮೀಸಲಾತಿ ಬೇಡ ಸಾಣೇಹಳ್ಳಿ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಶತಮಾನಗಳಿಂದ ತುಳಿತಕ್ಕೆ ಒಳಗಾದವರಿಗೆ ಶಿಕ್ಷಣ ಹಾಗೂ ಸೌಲಭ್ಯಗಳಲ್ಲಿ ಮೀಸಲಾತಿ ನೀಡಬೇಕು. ಆದರೆ, ಮೀಸಲಾತಿ ಪಡೆದು ಅಭಿವೃದ್ಧಿ ಹೊಂದಿದವರ ಮಕ್ಕಳಿಗೂ ಮತ್ತೆ ಮೀಸಲಾತಿ ಬೇಡ. ಅಂತೆಯೇ ಬಡ್ತಿಯಲ್ಲೂ ಮೀಸಲಾತಿ ನೀಡುವ ಅಗತ್ಯವಿಲ್ಲ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಶನಿವಾರ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಜಾತಿ–ಧರ್ಮದ ವ್ಯವಸ್ಥೆಯನ್ನು ಅಳಿಸಲು ಸಾಧ್ಯವಿಲ್ಲ. ಆದರೆ, ಪರಸ್ಪರ ಪ್ರೀತಿ–ಸೌಹಾರ್ದತೆಯಿಂದ ಅರಿತು–ಬೆರೆತು ಸಮಾಜದಲ್ಲಿ ಸಾಮರಸ್ಯ ಮತ್ತು ಅಭಿವೃದ್ಧಿ ಸಾಧಿಸಲು ಸಾಧ್ಯ’ ಎಂದು ಪ್ರತಿಪಾದಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸವ ಸಿದ್ಧಾಂತ ಅನುಸರಿಸುವವರೆಲ್ಲಾ ಲಿಂಗಾಯತರೇ. ಲಿಂಗಾಯತ ಎನ್ನುವುದು ಜಾತಿ ಅಲ್ಲ. ಅದು ತತ್ವ, ಒಂದು ಸಿದ್ಧಾಂತ. ಕೇವಲ ಯಡಿಯೂರಪ್ಪ ಅವರೊಬ್ಬರನ್ನು ಮಾತ್ರ ಲಿಂಗಾಯತರೆಂದು ಕರೆದರೆ ಹೇಗೆ?’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಮತ್ತೆ ಕಲ್ಯಾಣ’ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸ್ವರೂಪಗಳಲ್ಲಿ ನಡೆಯಲಿದೆ. ಆ ಬಳಿಕ ಸಾಣೇಹಳ್ಳಿಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನದ ರಾಜ್ಯ ಮಟ್ಟದ 20 ದಿನಗಳ ಕಾರ್ಯಾಗಾರ ನಡೆಸಲಾಗುವುದು’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು