ಶನಿವಾರ, ಜೂಲೈ 11, 2020
29 °C

ಕೊರೊನಾ ವೈರಸ್; ಆತಂಕ ಬೇಡ ಎಂದ ಸಚಿವ ಡಾ.ಕೆ.ಸುಧಾಕರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ಬಗ್ಗೆ ಜನ ಆತಂಕಪಡುವ ಅಗತ್ಯ ಇಲ್ಲ. ಆರು ತಿಂಗಳ ಮಟ್ಟಿಗೆ ಬೇಕಾದ ಔಷಧ, ಮುಖಗವಸು ಸಹಿತ ಅಗತ್ಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಸದಸ್ಯರ ಆತಂಕಗಳಿಗೆ ಉತ್ತರಿಸಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ 650 ಪ್ರತ್ಯೇಕ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೊಂದಿಗೆ ಸಹ ಮಾತುಕತೆ ನಡೆಸಲಾಗಿದೆ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸುವ ಸಿದ್ಧತೆ ನಡೆಸಲಾಗಿದೆ ಎಂದರು.

ಎನ್ಎಬಿಎಚ್ ಪ್ರಮಾಣಪತ್ರ ಹೊಂದಿದ ಪ್ರಯೋಗಾಲಯಗಳಲ್ಲಿ ಮಾತ್ರ ಕೊರೊನಾ ಪರೀಕ್ಷೆಯ ಫಲಿತಾಂಶ ನಿಖರವಾಗಿ ಬರಲು ಸಾಧ್ಯ. ಪ್ರತಿ ಜಿಲ್ಲೆಯಲ್ಲಿ ಇಂತಹ ಪರೀಕ್ಷೆ ಲಭ್ಯವಾಗುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಜನರು ವದಂತಿಗಳಿಗೆ ಕಿವಿಗೊಡಬಾರದು. ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದು ಸರಿಯಲ್ಲ. ರೋಗ ಲಕ್ಷಣ ಇದ್ದವರು ಕಡ್ಡಾಯವಾಗಿ ಮುಖಗವಸು ಹಾಕಿಕೊಳ್ಳಬೇಕು. ರಾಜ್ಯದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ತೆಲಂಗಾಣದ ಟೆಕಿ ಸಂಪರ್ಕದಲ್ಲಿ ಇದ್ದವರನ್ನು ಪತ್ತೆಹಚ್ಚಿ, ಅವರನ್ನು ತಪಾಸಣೆಗೆ ಒಳಪಡಿಸುವ ಕೆಲಸ ಸಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು