ಶನಿವಾರ, ಫೆಬ್ರವರಿ 27, 2021
31 °C

ಮುದ್ದೇಬಿಹಾಳದಲ್ಲಿ ಪಕ್ಷೇತರರೇ ನಿರ್ಣಾಯಕ , ಹಿರೇಕೆರೂರ ಅತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪುರಸಭೆ ಫಲಿತಾಂಶ ಪ್ರಕಟವಾಗಿದೆ. 23 ಸದಸ್ಯ ಬಲದ ಪುರಸಭೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಎಂಟು ಸ್ಥಾನಗಳನ್ನು ಗಳಿಸಿ ಸಮಬಲ ಸಾಧಿಸಿವೆ.
ಜೆಡಿಎಸ್ ಎರಡು ಸ್ಥಾನ ಗಳಿಸಿದರೆ, ಪಕ್ಷೇತರರು ಐದು ಸ್ಥಾನ ಗಳಿಸಿದ್ದಾರೆ. ಫಲಿತಾಂಶ ಅತಂತ್ರವಾಗಿದ್ದು, ಅಧಿಕಾರದ ಚುಕ್ಕಾಣಿಗೆ ತೀವ್ರ ಕಸರತ್ತು ನಡೆಯಲಿದೆ

ಹಿರೇಕೆರೂರ ಪ. ಪಂ. ಅತಂತ್ರ 
ಹಾವೇರಿ: ಜಿಲ್ಲೆಯ ಹಿರೇಕೆರೂರ ಪಟ್ಟಣ ಪಂಚಾಯ್ತಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಒಟ್ಟು 20 ಸದಸ್ಯ ಬಲದ ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಎಂಟು, ಬಿಜೆಪಿ ಏಳು, ಪಕ್ಷೇತರರು ನಾಲ್ಕು ಮತ್ತು ಜೆಡಿಎಸ್ ಒಂದು ಸ್ಥಾನ ಗೆದ್ದುಗಕೊಂಡಿದೆ.
ಹಿರೇಕೆರೂರ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕ ಬಿ. ಸಿ. ಪಾಟೀಲ ಪ್ರತಿನಿಧಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು