7

‘ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ’

Published:
Updated:
ಎನ್.ಮಹೇಶ

ಕಲಬುರ್ಗಿ: ರಾಜ್ಯದ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ ಸ್ಪಷ್ಟಪಡಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಅಂತಹ ಶಾಲೆಗಳನ್ನು ಮಾತ್ರ ವಿಲೀನಗೊಳಿಸಲಾಗುವುದು. ಒಂದು ಮಗು, ಒಬ್ಬ ಶಿಕ್ಷಕರಿದ್ದರೂ ಶಾಲೆಯನ್ನು ಮುಚ್ಚುವುದಿಲ್ಲ’ ಎಂದು ತಿಳಿಸಿದರು.

‘ರಾಜ್ಯದ 4,100 ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ವಿಷಯವನ್ನು ಭಾಷೆಯಾಗಿ ಪರಿಚಯಿಸುವ ಚಿಂತನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶಿಕ್ಷಣ ತಜ್ಞರ ಜತೆ ಚರ್ಚಿಸಲಾಗುವುದು’ ಎಂದರು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !