ಶುಕ್ರವಾರ, ಡಿಸೆಂಬರ್ 13, 2019
20 °C

ಲಕ್ಷ್ಮಿ ಬ್ಯಾನರ್‌ನಲ್ಲಿ ಜಾರಕಿಹೊಳಿಗೆ ಸ್ಥಾನವಿಲ್ಲ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸುತ್ತಿರುವ ಗಣ್ಯರಿಗೆ ಸ್ವಾಗತ ಕೋರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್‌ ಅಳವಡಿಸಿದ್ದು, ಇದರಲ್ಲಿ ಅವರದ್ದೇ ಪಕ್ಷದ ಮುಖಂಡ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಭಾವಚಿತ್ರವಿಲ್ಲ.

ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರಿಗೆ ಶುಭ ಕೋರಿ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾನರ್‌ಗಳನ್ನು ಹಾಕಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರ ಭಾವಚಿತ್ರಗಳನ್ನು ಮಾತ್ರ ಹಾಕಲಾಗಿದೆ.

ಸರ್ಕಾರದ ಪ್ರತಿನಿಧಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಭಾವಚಿತ್ರವನ್ನು ಹಾಕದಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು