ಶನಿವಾರ, ಫೆಬ್ರವರಿ 22, 2020
19 °C
ಜಲಾಶಯಗಳು ಭರ್ತಿ, ಶಾಖೋತ್ಪನ್ನ ಘಟಕಗಳಲ್ಲಿ ಕಲ್ಲಿದ್ದಲು ದಾಸ್ತಾನು

ಈ ಸಲ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇಲ್ಲ!

ಕೆ.ಜೆ.ಮರಿಯಪ್ಪ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೇಸಿಗೆ ಕಾಲಿಟ್ಟರೆ ಎಲ್ಲೆಲ್ಲೂ ವಿದ್ಯುತ್‌ಗೆ ಹಾಹಾಕಾರ. ಯಾವಾಗ ವಿದ್ಯುತ್ ಇರುತ್ತದೊ, ಯಾವ ಗಳಿಗೆಯಲ್ಲಿ ಕತ್ತಲೆ ಆವರಿಸುತ್ತದೊ ಎಂಬ ಆತಂಕ ಜನರನ್ನು ಸದಾ ಕಾಡುತ್ತಿರುತ್ತದೆ. ಆದರೆ ಈ ಸಲ ಅಂತಹ ಆತಂಕ ಎದುರಾಗುವುದಿಲ್ಲ. ವಿದ್ಯುತ್ ಕಡಿತವೂ ಇರುವುದಿಲ್ಲ!

ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದರೆ, ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಲ್ಲಿದ್ದಲು ದಾಸ್ತಾನು ಮಾಡಲಾಗಿದೆ. ಜಲ ಹಾಗೂ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದ್ದು, ಮುಂದಿನ ಬೇಸಿಗೆಯಲ್ಲಿ ಕತ್ತಲೆಯ ದಿನಗಳು ದೂರವಾಗಲಿವೆ.

‘ಈ ಸಲದ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಎಂಬ ಮಾತೇ ಇರುವುದಿಲ್ಲ’ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಉತ್ಪಾದನೆ ಹೆಚ್ಚಳ: ಬೇಸಿಗೆ ಬಂದಾಗ ಲೆಲ್ಲ ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಲಿದ್ದು, ಈ ಸಲ ಬೇಡಿಕೆಗಿಂತಲೂ ಹೆಚ್ಚು ಉತ್ಪಾದನೆ ನಿರೀಕ್ಷಿಸಲಾಗಿದೆ. ನವೆಂಬರ್ ಮಧ್ಯ ಭಾಗದವರೆಗೂ ಉತ್ತಮ ಮಳೆಯಾಗಿದ್ದು, ಜಲಾಶಯಗಳು ಭರ್ತಿಯಾಗಿರುವುದರಿಂದ ಜಲ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಏರಿಕೆಯಾಗಲಿದೆ. ಶಾಖೋತ್ಪನ್ನ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಲ್ಲಿದ್ದಲು ದಾಸ್ತಾನು ಮಾಡಿದ್ದು, ಅಲ್ಲಿಯೂ ಉತ್ಪಾದನೆಯಲ್ಲಿ ಹೆಚ್ಚಳ ವಾಗಲಿದೆ. ಹಾಗಾಗಿ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗುವುದಿಲ್ಲ ಎಂದು ಕೆಪಿಸಿಎಲ್ ಮೂಲಗಳು ತಿಳಿಸಿವೆ.

ಜನವರಿ ನಂತರ ಬೇಡಿಕೆ ಹೆಚ್ಚಲಿದ್ದು, ನಂತರ ಉತ್ಪಾದನೆಯನ್ನೂ ಹೆಚ್ಚಳ ಮಾಡಲಾಗುತ್ತದೆ ಎಂದು ನಿಗಮದ ಅಧಿಕಾರಿಗಳು ಹೇಳುತ್ತಾರೆ.

ಕುಸಿದ ಬೇಡಿಕೆ: ಪ್ರಸ್ತುತ ಮಳೆ ಹಾಗೂ ಚಳಿಯ ವಾತಾವರಣ ಇರುವುದರಿಂದ ವಿದ್ಯುತ್ ಬೇಡಿಕೆಯೂ ಕಡಿಮೆಯಾಗಿದ್ದು, ಉತ್ಪಾದನೆಯನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ. ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ 8ರಲ್ಲಿ 3 ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 254 ಮೆಗಾ ವಾಟ್‌ಗೆ ಇಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)