ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್ ಭಾರತ ಭೇಟಿಯಿಂದ ಯಾವ ಪ್ರಯೋಜನವೂ ಇಲ್ಲ: ಸಿದ್ದರಾಮಯ್ಯ

Last Updated 24 ಫೆಬ್ರುವರಿ 2020, 8:54 IST
ಅಕ್ಷರ ಗಾತ್ರ

ಕಲಬುರ್ಗಿ: ಭಾರತಕ್ಕೆ ಟ್ರಂಪ್ ಆಗಮನದಿಂದ ಯಾವ ಪ್ರಯೋಜನವೂ ಅಗುವುದಿಲ್ಲ. ಮೋದಿಯೂ ಅಮೆರಿಕಕ್ಕೆ ಭೇಟಿ ನೀಡಿದ್ದರು. ಆಗ ಏನಾದರೂ ಒಳಿತಾಯಿತೇ ಎಂದು ವಿಧಾನಸಭೆ ವಿರೋಧ ಪಕ್ಷದ ‌ನಾಯಕ ಸಿದ್ದರಾಮಯ್ಯ ‌ಪ್ರಶ್ನಿಸಿದರು.

ನಗರದಲ್ಲಿ ‌ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು ಎಂದರು.

ರಾಹುಲ್ ಅಧ್ಯಕ್ಷರಾಗಬೇಕು

ರಾಹುಲ್ ಗಾಂಧಿಯೇ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು.ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಶೀಘ್ರದಲ್ಲಿ ಆಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹದಿನೈದನೇ ಹಣಕಾಸುಆಯೋಗದಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ.ಈ ವರ್ಷ ಒಂಬತ್ತು ಸಾವಿರ ಕೋಟಿ ಕಡಿಮೆಯಾಗಿದೆ.ಮುಂದಿನ ವರ್ಷ ₹ 11258 ಕೋಟಿ ಕಡಿಮೆಯಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಇಪ್ಪತ್ತೈದು ಜನ ಸಂಸದರು ಏನು ಮಾಡ್ತಿದ್ದಾರೆ?ಇದರ ಬಗ್ಗೆ ಯಾರಾದರೂ ಧ್ವನಿ ಎತ್ತುತ್ತಿದ್ದಾರಾ?ನಮಗೆ ಪ್ರವಾಹ ಬಂದಾಗಲು ಹೆಚ್ಚಿನ ಪರಿಹಾರ ನೀಡಲಿಲ್ಲ.

ಯಡಿಯೂರಪ್ಪ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿಲ್ಲ. ಮೋದಿ ಮತ್ತು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹೆದರುತ್ತಿದ್ದಾರೆ.ಯಡಿಯೂರಪ್ಪ ಅತ್ಯಂತ ‌ದುರ್ಬಲ ಮುಖ್ಯಮಂತ್ರಿ ಎಂದು ‌ಟೀಕಿಸಿದರು.ಬಿಜೆಪಿಯಲ್ಲಿರುವ ಅನೇಕರು ಅವರ ಪಕ್ಷ ತೊರೆಯಲು ಸಿದ್ದರಾಗಿದ್ದಾರೆ.ಬಿಜೆಪಿಯಲ್ಲಿ ತಳಮಳ ಪ್ರಾರಂಭವಾಗಿದೆ.ಅಧಿಕಾರದ ಕಚ್ಚಾಟ ಪ್ರಾರಂಭವಾಗಿದೆ.
ಬಿಜೆಪಿ ಕಚ್ಚಾಟದಿಂದ ಸರ್ಕಾರ ಬಿದ್ದರೆ ಮತ್ತೆ ಅಧಿಕಾರ ಹಿಡಿಯುವ ಯೋಚನೆ ಇಲ್ಲ. ಇದನ್ನು‌ ಕಾಂಗ್ರೆಸ್ ‌ಸದುಪಯೋಗ ಮಾಡಿಕೊಳ್ಳುವುದಿಲ್ಲ. ಆದರೆ ಬಿಜೆಪಿಗೇ ನಷ್ಟವಾಗಲಿದೆ ಎಂದು ‌ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT