ಶನಿವಾರ, ಫೆಬ್ರವರಿ 27, 2021
31 °C

ಕಾಂಗ್ರೆಸ್ ಶಾಸಕ ಪಕ್ಷದ ಸಭೆಗೆ ಹೋಗುವುದಿಲ್ಲ: ಆನಂದ್ ಸಿಂಗ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವ ವಿಚಾರ ಗೊತ್ತಿರಲಿಲ್ಲ’ ಎಂದು ಶಾಸಕ ಆನಂದ್‌ ಸಿಂಗ್ ಹೇಳಿದರು. ‘ಜಿಂದಾಲ್‌ಗೆ ಜಮೀನು ಮಾರಾಟ ಮಾಡಬಾರದು. ವಿಜಯನಗರ ಜಿಲ್ಲೆ ಘೋಷಣೆ ಮಾಡಬೇಕು. ಈ ಎರಡೂ ಬೇಡಿಕೆಗಳು ಈಡೇರುವವರೆಗೆ ನಾನು ರಾಜೀನಾಮೆ ಹಿಂಪಡೆಯುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀನಾಮೆ ಕುರಿತು ಸ್ಪೀಕರ್ ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ‌ ಉತ್ತರ ಕೊಡುವೆ. ರಾಜೀನಾಮೆ ಕೊಟ್ಟು ಮುಂಬೈಗೆ ಹೋಗುತ್ತಿರುವ ಶಾಸಕರ ಬಗ್ಗೆ ಪ್ರತಿಕ್ರಿಯಿಸಲಾರೆ’ ಎಂದರು.

‘ನಾನು ಬಿಜೆಪಿ ಸೇರುವುದರ ಬಗ್ಗೆ ಪ್ರತಿಕ್ರಿಯಿಸಲಾರೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ. ಸಿ.ಎಂ.ನನ್ನನ್ನು ಸಂಪರ್ಕಿಸಿರುವುದು ನಿಜ. ಅಮೆರಿಕದಿಂದಲೇ ಕರೆ ಮಾಡಿದ್ದರು. ನನ್ನ ಬೇಡಿಕೆ ಈಡೇರಿಸುವವರೆಗೆ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದೇನೆ’ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು