ಬೆಂಗಳೂರು: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸ್ಪಷ್ಟಪಡಿಸಿದ್ದಾರೆ.

‘ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಯಾವುದೇ ಹುರುಳಿಲ್ಲದ ಚರ್ಚೆಯಲ್ಲಿ ತೊಡಗಿದ್ದಾರೆ. ಬಹುಶ: ಆ ಎರಡು ಪಕ್ಷಗಳ ನಾಯಕರು ಸುದ್ದಿಯಲ್ಲಿರಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸರಕಾರದ ಮುಂದೆ ಯಾವುದೇ ಆ ತರಹದ ವಿಷಯವಾಗಲೀಅಥವಾ ಕಾರ್ಯಸೂಚಿಯಾಗಲಿ ಇಲ್ಲವೆಂದು ಸ್ಷಷ್ಠಪಡಿಸುತ್ತೇನೆ’ ಎಂದು ಬಿಎಸ್ವೈ ಹೇಳಿದ್ದಾರೆ.

ಶ್ರೀ ರಾಮನ ಬಗ್ಗೆ ನಮಗೆ ಇರುವ ಭಕ್ತಿಯನ್ನಾಗಲೀ ಅಥವಾ ಅಭಿಮಾನವನ್ನಾಗಲೀ ಯಾರು ಪ್ರಶ್ನಿಸಲು ಸಾಧ್ಯವಿಲ್ಲ ಎಂದಿರುವ ಅವರು, ‘ನನಗೆ ಅಚ್ಚರಿಯ ವಿಚಾರವೆನೆಂದರೆ ಕಾಂಗ್ರೆಸ್ನವರಿಗಾಗಲೀ ಜೆಡಿಎಸ್ನವರಿಗಾಗಲೀ ರಾಮನ ಬಗ್ಗೆಈಗ ಭಕ್ತಿಹುಟ್ಟಿದ್ದು. ಅವರ ಭಕ್ತಿ ನಿಜವಾಗಿದ್ದರೆ ಅದನ್ನು ಸ್ವಾಗತಿಸುತ್ತೇನೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಇಲ್ಲದ ವಿಷಯದ ಬಗ್ಗೆ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ." ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.