ಮೂರು ತಿಂಗಳಿಂದ ಸಂಬಳವಿಲ್ಲದೆ ಕೆಲಸ!

ಮಂಗಳವಾರ, ಜೂನ್ 18, 2019
23 °C
ಕೇಂದ್ರ ಪುರಾತತ್ವ ಸರ್ವೇಕ್ಷಣ ಇಲಾಖೆ ದಿನಗೂಲಿ ನೌಕರರ ಪರದಾಟ

ಮೂರು ತಿಂಗಳಿಂದ ಸಂಬಳವಿಲ್ಲದೆ ಕೆಲಸ!

Published:
Updated:

ಹೊಸಪೇಟೆ: ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ಎ.ಎಸ್‌.ಐ.) ಹಂಪಿ ವೃತ್ತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮನೆ ಬಾಡಿಗೆ, ಮಕ್ಕಳ ಶಾಲೆಯ ಶುಲ್ಕ, ದಿನಸಿ ಖರೀದಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕರು ಖಾಸಗಿಯವರ ಬಳಿ ಬಡ್ಡಿ ಸಹಿತ ಸಾಲ ಪಡೆದು ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಬಾಕಿ ವೇತನ ಪಾವತಿಸುವಂತೆ ನೌಕರರು ಹಲವು ಸಲ ಮನವಿ ಮಾಡಿಕೊಂಡಿದ್ದಾರೆ. ಪುರಾತತ್ವ  ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

ಇಲಾಖೆಯಲ್ಲಿ ಒಟ್ಟು 190 ಜನ ದಿನಗೂಲಿ ನೌಕರರಿದ್ದಾರೆ. ಅನೇಕ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ನೌಕರರು ಮಾಸಿಕ ₹10 ಸಾವಿರ ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಲ್ಲಿ ಮನೆ ನಡೆಸುತ್ತಿರುವ ನೌಕರರಿಗೆ ಸಕಾಲಕ್ಕೆ ವೇತನ ಸಿಗದೇ ಇರುವುದರಿಂದ ಅವರ ಬದುಕು ಅತಂತ್ರವಾಗಿದೆ.

ಹಂಪಿ ಪರಿಸರದಲ್ಲಿ ಉದ್ಯಾನ ನಿರ್ವಹಣೆ, ಸ್ಮಾರಕಗಳ ಸುತ್ತಮುತ್ತ ಸ್ವಚ್ಛತೆ, ಉತ್ಖನನ ಸಂದರ್ಭದಲ್ಲಿ ನೆರವಾಗುವುದು, ಸ್ಮಾರಕಗಳ ಜೀರ್ಣೋದ್ಧಾರ ಸೇರಿದಂತೆ ಇತರ ಎಲ್ಲ ಕೆಲಸಕ್ಕೂ ಇದೇ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. ‘ಸಕಾಲಕ್ಕೆ ಸಂಬಳವೂ ಕೊಡುವುದಿಲ್ಲ. ಅದನ್ನು ಹೆಚ್ಚು ಸಹ ಮಾಡೊಲ್ಲ’ ಎನ್ನುತ್ತಾರೆ ನೌಕರರು.

‘25–30 ವರ್ಷಗಳಿಂದ ಕನಿಷ್ಠ ವೇತನದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ನೌಕರಿ ಕಾಯಂ ಆಗಿಲ್ಲ. ಆಗುವ ಭರವಸೆಯೂ ಇಲ್ಲ. ಸಂಬಳವಾದರೂ ಸಮಯಕ್ಕೆ ಸರಿಯಾಗಿ ಕೊಡಬೇಕು. ಮನೆ ನಡೆಸುವುದು ಕಷ್ಟವಾಗಿದೆ’ ಎಂದು ಹೆಸರು ಬಹಿರಂಪಡಿಸಲು ಇಚ್ಛಿಸದ ನೌಕರರೊಬ್ಬರು ಗೋಳು ತೋಡಿಕೊಂಡರು.

‘ಈ ನೌಕರಿಯೇ ಸಾಕು ಅನಿಸುತ್ತಿದೆ. ಆದರೆ, ಇಂತಹ ಬರಗಾಲದಲ್ಲಿ ಬೇರೆ ನೌಕರಿ ಸಿಗುವುದು ಬಹಳ ಕಷ್ಟ. ನೌಕರಿ ಬಿಟ್ಟರೂ ಕಷ್ಟ. ಬಿಡದಿದ್ದರೂ ಕಷ್ಟ. ಏನು ಮಾಡಬೇಕು ಎನ್ನುವುದು ತೋಚುತ್ತಿಲ್ಲ. ಈ ವರ್ಷ ಸಾಲ ಮಾಡಿ ಈದ್‌ ಮಾಡಿದ್ದೇವೆ. ಹೇಗೋ ಹಬ್ಬ ಮಾಡಿದ್ದೇವೆ. ಮಕ್ಕಳ ಶಾಲೆಗೆ ಶುಲ್ಕ, ಮನೆ ನಡೆಸುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ’ ಎಂದು ಸಂಕಷ್ಟ ಹೇಳಿಕೊಂಡರು.

‘ಸಂಬಳ ವಿಳಂಬವಾಗುತ್ತಿರುವುದು ಇದೇ ಮೊದಲ ಸಲವೇನೂ ಅಲ್ಲ. ಆಗಾಗ ಆಗುತ್ತಲೇ ಇರುತ್ತದೆ. ನೌಕರರಿಗೆ ಎದುರಾಗುತ್ತಿರುವ ಸಮಸ್ಯೆಯನ್ನು ಕೇಂದ್ರ ಕಚೇರಿಯ ಗಮನಕ್ಕೆ ತರಲಾಗಿದೆ’ ಎಂದು ಎ.ಎಸ್‌.ಐ. ಅಧಿಕಾರಿ ಸೋಮ್ಲ ನಾಯ್ಕ ತಿಳಿಸಿದರು.

ಕೇಂದ್ರ ಕಚೇರಿಯಿಂದ ಬಜೆಟ್‌ ಬಂದಿಲ್ಲ. ಬಹುಶಃ ಜುಲೈ ನಂತರವೇ ಬರಬಹುದು. ಈ ಕುರಿತು ಮೇಲಿನವರಿಗೆ ಅನೇಕ ಸಲ ತಿಳಿಸಿದರೂ ಪ್ರಯೋಜನವಾಗಿಲ್ಲ

- ಸೋಮ್ಲ ನಾಯ್ಕ, ಎಎಸ್‌ಐ ಅಧಿಕಾರಿ, ಹಂಪಿ

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !