ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ, ಮುಂದೂಡುವುದು ಸೂಕ್ತ: ಪಂಡಿತಾರಾಧ್ಯ ಸ್ವಾಮೀಜಿ

Last Updated 26 ಮೇ 2020, 14:44 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯಾರ್ಥಿಗಳು ಮತ್ತು ಸಮಾಜದ ಆರೋಗ್ಯದ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡುವುದು ಸೂಕ್ತ. ಜೀವಕ್ಕಿಂತ ಯಾವುದೂ ದೊಡ್ಡದಲ್ಲ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಪರೀಕ್ಷೆಯ ದಿನಾಂಕವನ್ನು ಸರ್ಕಾರ ನಿಗದಿಪಡಿಸಲಾಗಿದೆ. ಮತ್ತೊಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಕ್ಕೂ ಸೋಂಕು ವಿಸ್ತರಿಸಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಗೊಂಡಿದ್ದಾರೆ. ನಿರಂತರ ಮೌಲ್ಯಮಾಪನ ಹಾಗೂ ಪೂರ್ವಸಿದ್ಧತಾ ಪರೀಕ್ಷೆಯ ಅಂಕಗಳ ಆಧಾರದ ಮೇರೆಗೆ ಗ್ರೇಡ್ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ಪರೀಕ್ಷೆ ನಡೆಸುವುದರಿಂದ ಸೋಂಕು ಇನ್ನಷ್ಟು ಪಸರಿಸುವ ಸಾಧ್ಯತೆ ಇದೆ. ಸೋಂಕು ಹರಡುವುದನ್ನು ನಿಯಂತ್ರಿಸಲು ಇಷ್ಟು ದಿನ ಕೈಗೊಂಡ ಕ್ರಮಗಳೆಲ್ಲವೂ ಮಣ್ಣುಪಾಲಾಗುವ ಸಂಭವವಿದೆ. ಜನವಸತಿ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರ ತೆರೆಯುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಬಹುದು. ಶಿಕ್ಷಣ ಸಚಿವರು ತಜ್ಞರೊಂದಿಗೆ ಚರ್ಚಿಸಿ ಯೋಗ್ಯ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT