ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಅಧಿಕಾರಕ್ಕಾಗಿ ಹಿಂಬಾಗಿಲ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ ಜಾರಕಿಹೊಳಿ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದೇನೆ. ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ' ಎಂದರು.
ಜಿ.ಟಿ. ದೇವೇಗೌಡರಿಗೆ ಮಾಹಿತಿ ಕೊರತೆ ಇದೆ. ಸರ್ಕಾರ ಉರುಳಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರೇ ಪ್ರಯತ್ನಿಸುತ್ತಿದ್ದಾರೆ. ಶಾಸಕರಿಗೆ ಅಧಿಕಾರ ಮತ್ತು ಹಣದ ಆಮಿಷ ನೀಡಿ ಸರ್ಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದರು.
ತುರ್ತು ಶಾಸಕಾಂಗ ಸಭೆ ಕರೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ರಚನೆ ಆದಾಗಿನಿಂದ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗುತ್ತಿಲ್ಲ. ಆಗುವುದೂ ಇಲ್ಲ ಎಂದರು.
ಯಾವ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.