ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿಗೆ ನೋಟಿಸ್‌

7
ಕೆ.ಸಿ ವ್ಯಾಲಿಯಿಂದ ಕೋಲಾರ, ಚಿಕ್ಕಬಳ್ಳಾಪುರ ಕೆರೆಗಳಿಗೆ ಕಲುಷಿತ ನೀರು

ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿಗೆ ನೋಟಿಸ್‌

Published:
Updated:

ಬೆಂಗಳೂರು: ಕೆ.ಸಿ ವ್ಯಾಲಿಯಿಂದ ಕೋಲಾರ, ಚಿಕ್ಕಬಳ್ಳಾಪುರ ಕೆರೆಗಳಿಗೆ ಕಲುಷಿತ ನೀರು ಹರಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಜಲ ಸಂಪನ್ಮೂಲ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಕಲುಷಿತ ನೀರು ಕೆರೆಗಳಿಗೆ ಹೇಗೆ ಹರಿಯುತ್ತಿದೆ. ಅದನ್ನು ಸಂಸ್ಕರಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ನೋಟಿಸ್‌ನಲ್ಲಿ ಕೇಳಲಾಗಿದೆ.

ಬೆಂಗಳೂರು ಜಲ ಮಂಡಳಿ ಅಧ್ಯಕ್ಷ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಮಹಾನಗರಪಾಲಿಕೆ ಆಯುಕ್ತ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ನೋಟಿಸ್‌ ರವಾನಿಸಲಾಗಿದೆ.

ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಲೋಕಾಯುಕ್ತ ಜುಲೈ 20ರಂದು ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿದ್ದು, ಸೆಪ್ರೆಂಬರ್‌ 4ರಂದು ವಿಚಾರಣೆ ನಡೆಯಲಿದೆ.

ಕಲುಷಿತ ನೀರನ್ನು ತಮ್ಮ ಗ್ರಾಮಗಳ ಕೆರೆಗಳಿಗೆ ಹರಿಸುತ್ತಿರುವ ಬಗ್ಗೆ ಆ ಭಾಗದ ರೈತರು ಆಕ್ಷೇಪ ವ್ಯಕ್ತಪಡಿಸಿದ್ದರು. ರಾಸಾಯನಿಕ ಮಿಶ್ರಿತ ನೀರಿನಿಂದ ಬೆಳೆದ ತರಕಾರಿ ಬೆಂಗಳೂರಿಗೂ ಸರಬರಾಜಾಗುತ್ತಿದ್ದು ಗ್ರಾಹಕರಲ್ಲೂ ಆತಂಕ ಸೃಷ್ಟಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !