ಬುಧವಾರ, ಜನವರಿ 29, 2020
30 °C

ಎನ್‍ಆರ್‌ಸಿ ರಾಷ್ಟ್ರೀಯ ನೀತಿಯಾಗಲಿ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಆರ್‌ಸಿ) ನೀತಿ ಎಲ್ಲಾ ರಾಜ್ಯಗಳಿಗೂ ಅನ್ವಯವಾಗಬೇಕು ಎಂಬುದು ಕೇಂದ್ರದ ಚಿಂತನೆಯಾಗಿದೆ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಹನಗವಾಡಿ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠಕ್ಕೆ ಮಂಗಳವಾರ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ದೇಶದ ಭದ್ರತೆಗೆ ಅಪಾಯ ಒಡ್ಡುತ್ತಿರುವ ಅಕ್ರಮ ವಲಸಿಗರನ್ನು ಅವರ ಮಾತೃದೇಶಕ್ಕೆ ಗಡಿಪಾರು ಮಾಡುವ ಉದ್ದೇಶದಿಂದ ಕಾನೂನು ಜಾರಿಗೊಳಿಸಲಾಗುತ್ತಿದೆ. ದೇಶದ ಹಿತದೃಷ್ಟಿಯಿಂದ ಕೇಂದ್ರದ ನಿರ್ಣಯವನ್ನು ರಾಜ್ಯ ಸರ್ಕಾರ ಅನುಮೋದಿಸಲಿದೆ ಎಂದರು.

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮ ವಲಸಿಗರ ಸರ್ವೆ ಕಾರ್ಯ ಆರಂಭವಾಗಿದೆ. ಈ ಕುರಿತ ಅಂಕಿಅಂಶಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಈಗಾಗಲೇ ನೈಜೀರಿಯಾದ 16 ಹಾಗೂ ಬಾಂಗ್ಲಾದೇಶದ 63 ನಾಗರಿಕರನ್ನು ಪತ್ತೆಹಚ್ಚಿ, ಕೇಂದ್ರ ಸರ್ಕಾರದ ಸಹಕಾರದಿಂದ ಅವರ ದೇಶಕ್ಕೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಣೆಬೆನ್ನೂರು ಶಾಸಕ ಅರುಣ್ ಕುಮಾರ್‌ ಪೂಜಾರ, ಪೀಠದ ಟ್ರಸ್ಟ್‌ ಧರ್ಮದರ್ಶಿ ಬಿ.ಸಿ. ಉಮಾಪತಿ ಇದ್ದರು.

ವಿರೋಧಪಕ್ಷದವರ ಟೀಕೆ– ಮತದಾರರಿಗೆ ಮಾಡುವ ಅವಮಾನ: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ರಾಜ್ಯದ ಮತದಾರರು ಬಿಜೆಪಿ ಪರ ಒಲವು ಹೊಂದಿರುವುದನ್ನು ನಿರೂಪಿಸಿದೆ. ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜನಪರ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು.‌

ವಿರೋಧಪಕ್ಷದವರ ಟೀಕೆ: ಮತದಾರರಿಗೆ ಮಾಡುವ ಅವಮಾನ

ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ರಾಜ್ಯದ ಮತದಾರರು ಬಿಜೆಪಿ ಪರ ಒಲವು ಹೊಂದಿರುವುದನ್ನು ನಿರೂಪಿಸಿದೆ. ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜನಪರ ಆಡಳಿತ ನೀಡುತ್ತೇವೆ ಎಂದರು.

ತೋಳ್ಬಲ, ಹಣ ಬಲದಿಂದ ಬಿಜೆಪಿಗೆ ಜಯಸಿಕ್ಕಿದೆ ಎಂಬ ವಿರೋಧಪಕ್ಷಗಳ ಟೀಕೆ ಕುರಿತ ಪ್ರಶ್ನೆಗೆ, ವಿರೋಧಪಕ್ಷದವರು ಸೋತಾಗ ಮಾಡುವ ಸಾಮಾನ್ಯ ಆರೋಪ ಇದು. ಇದು ಮತ ಹಾಕಿದವರಿಗೆ ಮಾಡುವ ಅಪಮಾನವಾಗಿದೆ ಎಂದರು.

ಉಪಚುನಾವಣೆಯಲ್ಲಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಹಂಚಿಕೆ, ಸಚಿವ ಸಂಪುಟದ ಪುನರ್‌ ರಚನೆ, ಜಿಲ್ಲಾ ಉಸ್ತುವಾರಿ ನಿರ್ವಹಣೆ ವಿಷಯಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಅವರು ತೀರ್ಮಾನ ಕೈಗೊಳ್ಳುವರು ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು