ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಚೆನ್ನವೀರ ಕಣವಿಗೆ ನೃಪತುಂಗ ಸಾಹಿತ್ಯ ಪ್ರಶಸ್ತಿ

Last Updated 2 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕವಿ ಚೆನ್ನವೀರ ಕಣವಿ ಅವರು 2019ನೇ ಸಾಲಿನ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು 7 ಲಕ್ಷದ 1 ರೂಪಾಯಿ ನಗದು ಒಳಗೊಂಡಿದೆ. ಪ್ರಶಸ್ತಿಯನ್ನುಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದೆ.

45 ವರ್ಷದೊಳಗಿನ ಸಾಹಿತಿಗಳಿಗೆ ನೀಡುವ ‘ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ’ಗೆ ಶರಣು ಹುಲ್ಲೂರು ಹಾಗೂ ಕೆ.ಆರ್.ಸೌಮ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ.

‌ಕವಿ ಸಿದ್ಧಲಿಂಗಯ್ಯ, ವಿಮರ್ಶಕ ಜಿ.ಎಂ.ಹೆಗಡೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾರ್ಮಿಕ ಕಲ್ಯಾಣ ಅಧಿಕಾರಿ ವಿಜಯಕುಮಾರ್ ರೈ, ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ.ಚನ್ನೇಗೌಡ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT