ಬುಧವಾರ, ಮಾರ್ಚ್ 3, 2021
19 °C

ಐವರು ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ನೂತನವಾಗಿ ನೇಮಕಗೊಂಡ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಹೈಕೋರ್ಟ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ
ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿಗಳು: ಶಿವಶಂಕರ ಅಮರಣ್ಣವರ, ಎಂ.ಗಣೇಶಯ್ಯ ಉಮಾ, ವೇದವ್ಯಾಸಾಚಾರ ಶ್ರೀಶಾನಂದ, ಹಂಚಾಟೆ ಸಂಜೀವಕುಮಾರ್ ಮತ್ತು ಪದ್ಮರಾಜ ನೇಮಚಂದ್ರ ದೇಸಾಯಿ.

ಕಾರ್ಯಕ್ರಮದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ್, ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಜೆ.ಎಂ. ಅನಿಲ್ ಕುಮಾರ್ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಇದ್ದರು. ಕಟ್ಟುನಿಟ್ಟಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು