ಸಿದ್ದರಾಮಯ್ಯ ಅಸಮಾಧಾನಕ್ಕೆ ಅಧಿಕಾರಿಗಳ ವರ್ಗಾವಣೆ ಕಾರಣ

7

ಸಿದ್ದರಾಮಯ್ಯ ಅಸಮಾಧಾನಕ್ಕೆ ಅಧಿಕಾರಿಗಳ ವರ್ಗಾವಣೆ ಕಾರಣ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು  ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ  ನಡುವಿನ ಮನಸ್ತಾಪಕ್ಕೆ ಅಧಿಕಾರಿಗಳ ವರ್ಗಾವಣೆ ಕೂಡಾ ಕಾರಣವೇ?

- ಅಧಿಕಾರಿಗಳ ವರ್ಗಾವಣೆಯಲ್ಲಿ  ಜೆಡಿಎಸ್ ನಾಯಕರ  ಮೇಲುಗೈ ಸಿದ್ದರಾಮಯ್ಯ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಪ್ತ ಐಎಎಸ್ ಅಧಿಕಾರಿಗಳ ವರ್ಗಾವಣೆ ಬಗ್ಗೆಯೂ ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಬೆಂಗಳೂರು ಪಶ್ಚಿಮ ವಲಯ ಉಪವಿಭಾಗಧಿಕಾರಿ ಜಗದೀಶ್ ಮತ್ತು ಐಎಎಸ್ ಅಧಿಕಾರಿ ತುಷರ್ ಗಿರಿನಾಥ್ ವರ್ಗಾವಣೆಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಆಪ್ತರಾಗಿದ್ದ ಐಎಎಸ್ ಅಧಿಕಾರಿ ಅತಿಕ್ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ. ಕೊರಟಗೆರೆ ಮಾಜಿ ಶಾಸಕ  ಸುಧಾಕರ ಲಾಲ್ ಪತ್ನಿ ರೂಪಾ ಅವರನ್ನು ಬೆಂಗಳೂರಿನ ವಿಶೇಷ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದು ಸಿದ್ದರಾಮಯ್ಯ ಸಿಟ್ಡಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹರ್ಷ ಸ್ಥಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತ ವಿಶುಕುಮಾರ್ ಅವರನ್ನು ನೇಮಿಸಲು ಎಚ್‌ಡಿಕೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೃಷ್ಣಭೈರೇಗೌಡ–ವೇಣುಗೋಪಾಲ್ ಮಾತುಕತೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನು ಸಚಿವ ಕೃಷ್ಣ ಭೈರೇಗೌಡ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬೆಳವಣಿಗೆ, ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈಗಾಗಲೇ ನಿಗಮ- ಮಂಡಳಿ ನೇಮಕವನ್ನು ರಾಜ್ಯ ನಾಯಕರಿಗೆ ಹೈಕಮಾಂಡ್ ವಹಿಸಿದೆ. ಅರ್ಹ ಶಾಸಕರಿಗೆ ಪ್ರಮುಖ ನಿಗಮ ಮಂಡಳಿ ನೀಡುವಂತೆ ಸೂಚಿಸಿದೆ. ತಿಂಗಳಾಂತ್ಯದೊಳಗೆ ಸಂಪುಟ ವಿಸ್ತರಿಸುವ ಸಾಧ್ಯತೆಯೂ ಇದೆ. ಖಾಲಿ ಇರುವ ಆರು ಸ್ಥಾನಗಳಲ್ಲಿ ನಾಲ್ಕು ಭರ್ತಿ ಮಾಡುವ ಚಿಂತನೆ ನಡೆದಿದೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 2

  Sad
 • 1

  Frustrated
 • 5

  Angry

Comments:

0 comments

Write the first review for this !