ಗುರುವಾರ , ಫೆಬ್ರವರಿ 27, 2020
19 °C
60 ತುಂಬಿದ ತಕ್ಷಣ ಯೋಜನೆ ವ್ಯಾಪ್ತಿಗೆ ಹಿರಿಯರು

ವೃದ್ಧಾಪ್ಯ ವೇತನಕ್ಕೆ ಅರ್ಜಿ ಬೇಕಿಲ್ಲ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃದ್ಧಾಪ್ಯ ವೇತನಕ್ಕಾಗಿ ಇನ್ನು ಮುಂದೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಹ ಫಲಾನುಭವಿಗಳಿಗೆ 60 ವರ್ಷ ತುಂಬಿದ ತಕ್ಷಣವೇ ಸರ್ಕಾರವೇ ಪತ್ರ ಕಳುಹಿಸಿ, ಅಂತಹವರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸುತ್ತದೆ.

ಈ ಯೋಜನೆಗೆ ಮುಂದಿನ ತಿಂಗಳು ಉಡುಪಿಯಲ್ಲಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಅವರು ಮಾಹಿತಿ ನೀಡಿದರು.

ಈವರೆಗೆ ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಿ ತಿಂಗಳುಗಟ್ಟಲೆ ಕಾಯಬೇಕಾಗಿತ್ತು. ಇನ್ನು ಮುಂದೆ ಅದಕ್ಕೆ ಅವಕಾಶವಿಲ್ಲ. ಬಿಪಿಎಲ್‌ ಪಡಿತರ ಚೀಟಿಯನ್ನು ಆಧಾರ್‌ಗೆ ಜೋಡಿಸಿರುವುದರಿಂದ ಬಿ‍ಪಿಎಲ್‌ ಕುಟುಂಬಗಳ ಪೂರ್ಣ ದತ್ತಾಂಶ ಇಲಾಖೆಯಲ್ಲಿದೆ. ಪ್ರತಿ ವ್ಯಕ್ತಿಯ ಜನ್ಮ ದಿನಾಂಕದ ಅನ್ವಯ 60 ವರ್ಷ ವಯಸ್ಸು ತುಂಬಿದ ತಕ್ಷಣವೇ, ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಮಾತ್ರ ಪತ್ರ ಕಳುಹಿಸಲಾಗುತ್ತದೆ ಎಂದು ಕಂದಾಯ ಇಲಾಖೆ  ಅಧಿಕಾರಿಯೊಬ್ಬರು ತಿಳಿಸಿದರು.

ನಿರ್ದಿಷ್ಟ ದಿನಾಂಕದಂದು ನಾಡ ಕಚೇರಿಗೆ ಬಂದು ಫೋಟೊ ತೆಗೆಸಿಕೊಂಡು ಸಹಿ ಹಾಕಲು ಸೂಚಿಸಲಾಗುತ್ತದೆ. ಫೋಟೊ ಮತ್ತು ಸಹಿ ಸರ್ವರ್‌ಗೆ ಅಪ್‌ಲೋಡ್‌ ಮಾಡಲಾಗುತ್ತದೆ. ಈ ಪ್ರಕ್ರಿಯೆ ಮುಗಿದ ಬಳಿಕ ಅವರ ಖಾತೆಗೇ ಹಣ ಜಮೆಯಾಗುತ್ತದೆ. ಇದಕ್ಕಾಗಿ ಸಾಫ್ಟ್‌ವೇರ್‌ ಸಿದ್ಧಪಡಿಸಲಾಗಿದೆ. ವಯಸ್ಸು, ಆದಾಯ ಮತ್ತಿತರ ಮಾಹಿತಿಗೆ ಅನುಗುಣವಾಗಿ ಪತ್ರವನ್ನು ಸಿದ್ಧಪಡಿಸಲಾಗುತ್ತದೆ ಎಂದರು.

ಈ ಯೋಜನೆಯನ್ನು ವರ್ಷದ ಹಿಂದೆ ಬಳ್ಳಾರಿ ಮತ್ತು ಕಾರವಾರದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದ್ದು, ಇದು ಯಶಸ್ವಿ ಯಾಗಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಯೋಜನೆಯನ್ನು ಇಡೀ ರಾಜ್ಯದಲ್ಲಿ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು