ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಶುರು| ಹಳ್ಳಿಯಲ್ಲಿ ಹಬ್ಬದ ಸಂಭ್ರಮ

ಭಾನುವಾರ, ಜೂಲೈ 21, 2019
22 °C
ಯಾದಗಿರಿ ಜಿಲ್ಲೆ ಗುರುಮಠಕಲ್‌ ತಾಲ್ಲೂಕಿನ ಚಂಡರಕಿ

ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಶುರು| ಹಳ್ಳಿಯಲ್ಲಿ ಹಬ್ಬದ ಸಂಭ್ರಮ

Published:
Updated:
Prajavani

ಯಾದಗಿರಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೂನ್‌ 21ರಂದು ಗ್ರಾಮ ವಾಸ್ತವ್ಯ ಮಾಡಲಿರುವ ಗುರುಮಠಕಲ್‌ ತಾಲ್ಲೂಕಿನ ಚಂಡರಕಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶಾಲೆ ಮತ್ತು ಸರ್ಕಾರಿ ಕಟ್ಟಡಗಳಿಗೆ ಸುಣ್ಣ–ಬಣ್ಣ ಬಳಿದಿದ್ದು, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.

ಈ ಗ್ರಾಮ ಗುರುಮಠಕಲ್‌ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದು, ಜೆಡಿಎಸ್‌ನ ನಾಗನಗೌಡ ಕಂದಕೂರ ಇಲ್ಲಿಯ ಶಾಸಕ. ಹೀಗಾಗಿ ಗ್ರಾಮದೆಲ್ಲೆಡೆ ಜೆಡಿಎಸ್‌ ನಾಯಕರ ಕಟೌಟ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ‘ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಸೇರಿದಂತೆ ಕಾಂಗ್ರೆಸ್‌ ನಾಯಕರ ಭಾವಚಿತ್ರಗಳನ್ನು ಹಾಕಿಲ್ಲ. ಇಲ್ಲಿ ‘ಮೈತ್ರಿ ಧರ್ಮ ಪಾಲನೆಯಾಗಿಲ್ಲ’ ಎಂಬ ಅಪಸ್ವರವನ್ನೂ ಕೆಲವರು ಎತ್ತುತ್ತಿದ್ದಾರೆ.

ಇದನ್ನೂ ಓದಿ: ‘ಮುಖ್ಯಮಂತ್ರಿ ಜನತಾ ದರ್ಶನಕ್ಕೆ 10ರಿಂದ 15 ಸಾವಿರ ಭಾಗವಹಿಸುವ ನಿರೀಕ್ಷೆ’

ಬಿಜೆಪಿಯವರು ಯಾನಾಗುಂದಿಯಿಂದ ಮತ್ತು ರೈತ ಸಂಘದವರು ಗುರುಮಠಕಲ್‌ನಿಂದ ಪಾದಯಾತ್ರೆಯ ಮೂಲಕ ಈ ಗ್ರಾಮಕ್ಕೆ ತೆರಳಿ ಅಹವಾಲು ಸಲ್ಲಿಸಲು ಮುಂದಾಗಿದ್ದಾರೆ. ‘ಮುಖ್ಯಮಂತ್ರಿ ಬರುವಾಗ ಪಾದಯಾತ್ರೆ ಮಾಡಿದರೆ ಸರಿ ಇರಲ್ಲ ಎಂದು ಜೆಡಿಎಸ್‌ನ ಸ್ಥಳೀಯ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ’ ಎಂದು ರೈತ ಸಂಘದವರು ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಹ ಸಲ್ಲಿಸಿದ್ದಾರೆ.

ಇಡೀ ದಿನ ಜನರೊಂದಿಗೆ ಚರ್ಚೆ: ಬೆಳಿಗ್ಗೆ 10ಕ್ಕೆ ಚಂಡರಕಿ ತಲುಪುವ ಮುಖ್ಯಮಂತ್ರಿ ಸಂಜೆ 6ರ ವರೆಗೆ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲು ಆಲಿಸುವರು. ಜನತಾ ದರ್ಶನದಲ್ಲಿ 15 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲಾ ಆಡಳಿತ ಊಟದ ವ್ಯವಸ್ಥೆ ಮಾಡಿದೆ.

ಸಂಜೆ 6.30ರಿಂದ ರಾತ್ರಿ 8.30ರವರೆಗೆ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸುವರು. ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಸಹಭೋಜನ ಮಾಡಿ ಅದೇ ಶಾಲೆಯಲ್ಲಿ ವಾಸ್ತವ್ಯ ಮಾಡುವರು.

ಇದನ್ನೂ ಓದಿ: ಗ್ರಾಮ ವಾಸ್ತವ್ಯ| ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ‘ಪ್ಯಾಕೇಜ್‘ ಘೋಷಣೆ?

ಗ್ರಾಮವಾಸ್ತವ್ಯಕ್ಕಾಗಿ ಮೊದಲ ಹಂತದಲ್ಲಿ ಹೈದರಾಬಾದ್‌ ಕರ್ನಾಟಕದ ಯಾದಗಿರಿ, ಕಲಬುರ್ಗಿ, ರಾಯಚೂರು ಹಾಗೂ ಬೀದರ್‌ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳ ತಲಾ ಎರಡು ಗ್ರಾಮಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಲಿರುವ ಚಂಡರಕಿ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ನೋಟ​

ಜೂನ್‌ 22ರಂದು ಕಲಬುರ್ಗಿ ಜಿಲ್ಲೆಯ ಹೇರೂರ (ಬಿ), ಜೂನ್‌ 26ರಂದು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕರೇಗುಡ್ಡ, 27ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಉಜಳಂಬಾ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಬಿಜೆಪಿಯವರು ಯಾನಾಗುಂದಿಯಿಂದ ಮತ್ತು ರೈತ ಸಂಘದವರು ಗುರುಮಠಕಲ್‌ನಿಂದ ಪಾದಯಾತ್ರೆಯ ಮೂಲಕ ಈ ಗ್ರಾಮಕ್ಕೆ ತೆರಳಿ ಅಹವಾಲು ಸಲ್ಲಿಸಲು ಮುಂದಾಗಿದ್ದಾರೆ. ‘ಮುಖ್ಯಮಂತ್ರಿ ಬರುವಾಗ ಪಾದಯಾತ್ರೆ ಮಾಡಿದರೆ ಸರಿ ಇರಲ್ಲ ಎಂದು ಜೆಡಿಎಸ್‌ನ ಸ್ಥಳೀಯ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ’ ಎಂದು ರೈತ ಸಂಘದವರು ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಹ ಸಲ್ಲಿಸಿದ್ದಾರೆ. 

ಇಡೀ ದಿನ ಜನರೊಂದಿಗೆ ಚರ್ಚೆ: ಬೆಳಿಗ್ಗೆ 10ಕ್ಕೆ ಚಂಡರಕಿ ತಲುಪುವ ಮುಖ್ಯಮಂತ್ರಿ ಸಂಜೆ 6ರ ವರೆಗೆ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲು ಆಲಿಸುವರು. ಜನತಾ ದರ್ಶನದಲ್ಲಿ 15 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲಾ ಆಡಳಿತ ಊಟದ ವ್ಯವಸ್ಥೆ ಮಾಡಿದೆ.

ಸಂಜೆ 6.30ರಿಂದ ರಾತ್ರಿ 8.30ರವರೆಗೆ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸುವರು. ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಸಹಭೋಜನ ಮಾಡಿ ಅದೇ ಶಾಲೆಯಲ್ಲಿ ವಾಸ್ತವ್ಯ ಮಾಡುವರು.

ಗ್ರಾಮವಾಸ್ತವ್ಯಕ್ಕಾಗಿ ಮೊದಲ ಹಂತದಲ್ಲಿ ಹೈದರಾಬಾದ್‌ ಕರ್ನಾಟಕದ ಯಾದಗಿರಿ, ಕಲಬುರ್ಗಿ, ರಾಯಚೂರು ಹಾಗೂ ಬೀದರ್‌ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳ ಗ್ರಾಮಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.

ಜೂನ್‌ 22ರಂದು ಕಲಬುರ್ಗಿ ಜಿಲ್ಲೆಯ ಹೇರೂರ (ಬಿ), ಜೂನ್‌ 26ರಂದು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕರೇಗುಡ್ಡ, 27ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಉಜಳಂಬಾ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 3

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !