ಮಂಗಳವಾರ, ಜೂಲೈ 7, 2020
27 °C

ಒಂದೇ ದಿನ ಎರಡು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಟ್ರಾಫಿಕ್‌ ಇನ್‌ ಸ್ಪೆಕ್ಟರ್‌ ಮತ್ತು ಅರಣ್ಯ ಇಲಾಖೆಯ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಕ್ಟೋಬರ್‌ 7ರಂದು ಒಂದೇ ದಿನ ಲಿಖಿತ ಪರೀಕ್ಷೆಗಳನ್ನು ನಡೆಸುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ.

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿರುವ ಸಾವಿರಾರು ಅಭ್ಯರ್ಥಿಗಳು ಯಾವ ಪರೀಕ್ಷೆ ಬರೆಯಬೇಕು ಎಂಬ ಗೊಂದಲಕ್ಕೆ ಈಡಾಗಿದ್ದಾರೆ.

‘ಈ ಎರಡು ಪರೀಕ್ಷೆಯಲ್ಲಿ ಯಾವುದಾದರೂ ಒಂದು ಪರೀಕ್ಷೆಯನ್ನು ಮುಂದೂಡಿದರೆ, ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ’ ಎಂದು ಹುದ್ದೆಯ ಆಕಾಂಕ್ಷಿಯೊಬ್ಬರು ತಿಳಿಸಿದರು.

700 ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಮತ್ತು 100 ಅರಣ್ಯ ವೀಕ್ಷಕ ಹುದ್ದೆಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು