ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

120 ಅಡಿ ಎತ್ತರದ ವಿವೇಕಾನಂದ ಪ್ರತಿಮೆ ಸ್ಥಾಪನೆಗೆ ಚಿಂತನೆ: ಸಚಿವ ಸೋಮಣ್ಣ

Last Updated 30 ಮೇ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: ‘ಗುಜರಾತ್‌ನಲ್ಲಿರುವ ಸರ್ದಾರ್‌ ವಲ್ಲಭ ಬಾಯ್‌ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲಮಡುವಿನಲ್ಲಿ 120 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

‘ಮುತ್ಯಾಲಮಡುವಿನಲ್ಲಿ 180 ಎಕರೆ ಜಮೀನಿದ್ದು, ಈ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ಉದ್ಯಾನ ಬನ್ನೇರುಘಟ್ಟದಿಂದ 10ರಿಂದ 12 ಕಿ.ಮೀ ದೂರದಲ್ಲಿ ಈ ಜಾಗವಿದೆ. ಪ್ರತಿಮೆ ನಿರ್ಮಾಣ ಯೋಜನೆ ಪ್ರಾಥಮಿಕ ಹಂತದಲ್ಲಿದೆ. ಹೀಗಾಗಿ, ಎಷ್ಟು ವೆಚ್ಚ ತಗಲಬಹುದೆಂಬ ಬಗ್ಗೆ ಅಂತಿಮಗೊಂಡಿಲ್ಲ‘ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರೇರಾ ಬಲ: ‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೇರಾ (ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ) ಕಾಯ್ದೆ ಬಲಪಡಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಕಚೇರಿ ಆರಂಭಿಸಿ, ಅಧ್ಯಕ್ಷರನ್ನು ನೇಮಿಸಲಾಗಿದೆ. ಮಧ್ಯವರ್ತಿಗಳು ಕಡ್ಡಾಯವಾಗಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ರಾಜ್ಯದಲ್ಲಿ 4 ಸಾವಿರ ಮಧ್ಯವರ್ತಿಗಳಿದ್ದು, ಈಗಾಗಲೇ 2,500 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT