ಮಂಗಳವಾರ, ಏಪ್ರಿಲ್ 7, 2020
19 °C

ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೋವಿಡ್‌–19 ದೃಢ: ಸೋಂಕಿತರ ಸಂಖ್ಯೆ 8ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. 

32 ವರ್ಷದ ಸಾಫ್ಟ್‌ವೇರ್‌ ಎಂಜಿಯರ್‌ ಇದೇ ಮಾರ್ಚ್‌ 8ರಂದು ಅಮೆರಿಕದಿಂದ ಲಂಡನ್‌ ಮೂಲಕ ಬೆಂಗಳೂರಿಗೆ ಬಂದಿದ್ದರು. ಇದೇ ವಿಮಾನದಲ್ಲಿ ಈಗಾಗಲೇ ಸೋಂಕುಗೊಂಡು ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಮತ್ತೊಬ್ಬರು ಇದ್ದರು. 

ಮನೆಯಲ್ಲಿಯೇ ತೀವ್ರ ನಿಗಾಕ್ಕೆ ಒಳಪಟ್ಟಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಅನ್ನು ಸದ್ಯ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಪತ್ನಿ ಮತ್ತು ಮನೆ ಕೆಲಸದವರು ಅವರೊಂದಿಗೆ ಪ್ರತ್ಯಕ್ಷ–ಪರೋಕ್ಷವಾಗಿ ಸಂಪರ್ಕಕ್ಕೆ ಬಂದಿದ್ದಾರೆ. ಸಾಫ್ಟ್‌ವೇರ್‌ ಎಂಜಿನಿಯರ್‌ ಸಂಪರ್ಕಕ್ಕೆ ಯಾರೆಲ್ಲರು ಬಂದಿದ್ದರೋ ಅವರನ್ನು ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ. ಹೆಚ್ಚಿನ ಮಾಹಿತಿ ಸರ್ಕಾರದಿಂದ ನಾಳೆ ಹೊರಬೀಳಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು