ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರಶಿಕ್ಷಣ | ರಾಜ್ಯಕ್ಕೆ ಒಂದೇ ಮುಕ್ತ ವಿಶ್ವವಿದ್ಯಾಲಯ

ಉಳಿದ ಎಲ್ಲ ವಿ.ವಿ.ಗಳ ದೂರ ಶಿಕ್ಷಣ ಚಟುವಟಿಕೆ ಸ್ಥಗಿತ
Last Updated 11 ಜೂನ್ 2020, 21:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಮೈಸೂರಿನ ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ’ ಮಾತ್ರ ಕಾರ್ಯನಿರ್ವಹಿಸಲಿದ್ದು, ಉಳಿದ ವಿಶ್ವವಿದ್ಯಾಲಯಗಳು ನಡೆಸುತ್ತಿರುವ ದೂರಶಿಕ್ಷಣ ವಿಭಾಗಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಹಲವು ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ನೀಡುತ್ತಿವೆ. ಮುಂದೆ ಅವುಗಳಿಗೆ ಅವಕಾಶ ಇರುವುದಿಲ್ಲ. ಈ ಎಲ್ಲ ದೂರ ಶಿಕ್ಷಣ ವಿಭಾಗಗಳು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲೇ ನೋಂದಾಯಿಸಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು
* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯವಾಗಿ ಬದಲಾವಣೆ
* ಬೆಂಗಳೂರು ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ರೂಪಿಸಲಾಗುವುದು. ಇದಕ್ಕೆ ನೃಪತುಂಗ ವಿಶ್ವವಿದ್ಯಾಲಯ ಎಂದು ಹೆಸರಿಡಲು ನಿರ್ಧಾರ
* ಎಂಟುಜಿಲ್ಲೆಗಳ 47 ತಾಲ್ಲೂಕುಗಳಲ್ಲಿ 1694 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, 1307 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ.
* ರೈತ ಹೋರಾಟ, ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಾಟೆ ಮತ್ತು ಇತರ ಪ್ರತಿಭಟನೆ ಸಂದರ್ಭದಲ್ಲಿ ದಾಖಲಾಗಿದ್ದ 53 ಪ್ರಕರಣಗಳನ್ನು ಕೈಬಿಡಲು ತೀರ್ಮಾನ
*ಪೊಲೀಸ್‌ ಇಲಾಖೆಯ ಸಿಪಿಸಿ ಹುದ್ದೆಗಳ ಭರ್ತಿಯಲ್ಲಿ ಸಿಎಆರ್‌, ಡಿಎಆರ್‌, ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್‌ಗಳಿಗೆ ಶೇ 10 ರಷ್ಟು ಹುದ್ದೆಗಳು ಮೀಸಲು
* ರಿಯಲ್‌ ಎಸ್ಟೇಟ್‌‌ ಕಾಯ್ದೆಗೆ ತಿದ್ದುಪಡಿ ತಂದು ಇನ್ನು ಮುಂದೆ ಮಾರಾಟ ಒಪ್ಪಂದ ಪತ್ರವನ್ನು ದಾಖಲೆಯಾಗಿ ಪರಿಗಣಿಸಲು ತೀರ್ಮಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT