ಬುಧವಾರ, ನವೆಂಬರ್ 13, 2019
22 °C

ಪೌರಕಾರ್ಮಿಕರ ನೇಮಕ: ಅರ್ಜಿ ಸ್ವೀಕಾರ ಸ್ಥಗಿತ

Published:
Updated:

ಬೆಂಗಳೂರು: 4 ಸಾವಿರ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿ, ಈ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

‘ಸೆ. 9ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ತಾಂತ್ರಿಕ ದೋಷ ಕಂಡುಬಂದ ಕಾರಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದೇವೆ. ದೋಷ ಸರಿಪಡಿಸಲು 10 ದಿನಗಳ ಕಾಲಾವಕಾಶ ಬೇಕಿದ್ದು, ನಂತರ ಅರ್ಜಿ ಸಲ್ಲಿಸಬಹುದು’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)