ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 20 ಜೂನ್ 2020, 10:59 IST
ಅಕ್ಷರ ಗಾತ್ರ

ಬೆಂಗಳೂರು: 2019ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲೆಗಳ ಕಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ ಕೇಂದ್ರ ಸರ್ಕಾರದ, ಸಿಬಿಎಸ್‌ಇ, ಐಸಿಎಸ್‌ಇ ಮಾನ್ಯತೆ ಪಡೆದ ಶಾಲೆಗಳ ಕಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಜುಲೈ 6ರೊಳಗೆ ಅರ್ಜಿ ಸಲ್ಲಿಸಬಹುದು.

ಅಲ್ಲಿ ಸಲ್ಲಿಸುವ ವಿಧಾನ ಮತ್ತು ಮಾಹಿತಿಗಾಗಿ http://www.nationalawardtoteachers.mhrd.gov.in ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ http://www.schooleducation.kar.nic.in ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವವರು ಆಧಾರ್‌ ಕಾರ್ಡ್‌ ಕಡ್ಡಾಯ ಹೊಂದಿರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT