ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಶಿಕ್ಷಣ: ನಿಲುವು ತಿಳಿಸಲು ಸರ್ಕಾರಕ್ಕೆ ನಿರ್ದೇಶನ

Last Updated 26 ಜೂನ್ 2020, 20:30 IST
ಅಕ್ಷರ ಗಾತ್ರ

ಬೆಂಗಳೂರು: ತಜ್ಞರ ಸಮಿತಿಯ ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಿಷೇಧಿಸಿದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರದ ಆದೇಶ ರದ್ದು ಕೋರಿ ಅನುಮಿತಾ ಶರ್ಮಾ ಸೇರಿದಂತೆ ಪೋಷಕರು ಸಲ್ಲಿಸಿದ್ದ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು, ‘ಆನ್‌ಲೈನ್ ಶಿಕ್ಷಣದ ಕುರಿತಂತೆ ಪರಾಮರ್ಶಿಸಲು ಬೆಂಗಳೂರು ವಿ.ವಿ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಮಾಜಿ ಡೀನ್ ಎಂ.ಕೆ. ಶ್ರೀಧರ್ ನೇತೃತ್ವದಲ್ಲಿ 13 ಮಂದಿಯ ಸಮಿತಿ ರಚಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ’ಎಂದರು.

‘ತಜ್ಞರ ವರದಿ ಬರುವತನಕ ಮಕ್ಕಳು ಆನ್‌ಲೈನ್ ಶಿಕ್ಷಣ ಪಡೆಯಲು ಬಯಸಿದರೆ, ಅದಕ್ಕೆ ಅವಕಾಶ ನೀಡುವ ಬಗ್ಗೆ ನಿಲುವು ತಿಳಿಸಿ’ ಎಂದು ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT