ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌: 2ನೇ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದು ಕೇವಲ 110 ಮಂದಿ

Last Updated 13 ಮೇ 2019, 4:02 IST
ಅಕ್ಷರ ಗಾತ್ರ

ಬೆಂಗಳೂರು: ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬದಿಂದಾಗಿ ಇದೇ 5ರಂದು ‘ನೀಟ್‌’ ಬರೆಯಲು ಅಸಾಧ್ಯವಾದವರಿಗೆ ಇದೇ 20ರಂದು ಮರು ಪರೀಕ್ಷೆಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕೇವಲ 110.

ರೈಲು ವಿಳಂಬದಿಂದಾಗಿ 500ಕ್ಕೂ ಅಧಿಕ ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಅರ್ಜಿ ಸಲ್ಲಿಸಲು ಇದೇ 10 ಕೊನೆಯ ದಿನವಾಗಿತ್ತು.

ಸುಮಾರು 30 ಮಂದಿ ಮರು ಅರ್ಜಿ ಸಲ್ಲಿಸಿದ್ದು, ಅದಕ್ಕೆ ಕಾರಣ ನೀಡಿಲ್ಲ. ಹೀಗಾಗಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಮೇ 5ರಂದು ಬೆಂಗಳೂರಿಗೆ ಬರುತ್ತಿದ್ದುದನ್ನು ಖಚಿತಪಡಿಸುವ ರೈಲು ಟಿಕೆಟ್‌ ಮತ್ತು ಪ್ರವೇಶ ಪತ್ರವನ್ನು ಅರ್ಜಿಯ ಜತೆಯಲ್ಲಿ ಇಟ್ಟವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಸ್ಥಾಪಿಸಲಾದ ನಾಲ್ಕು ಸಹಾಯವಾಣಿಗಳಿಗೆ 900ಕ್ಕೂ ಅಧಿಕ ಕರೆಗಳು ಬಂದಿವೆ. ಕೆಲವರು ತಾವು ಮತ್ತೆ ಪರೀಕ್ಷೆಗೆ ಹಾಜರಾಗಿ ತಮ್ಮ ಅಂಕವನ್ನು ಸುಧಾರಿಸಬಹುದೇ ಎಂದು ಕೇಳಿದ್ದಾರೆ. ಆದರೆ, ರೈಲು ವಿಳಂಬದಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯ ಆಗದವರಿಗೆ ಮಾತ್ರ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT