ಗುರುವಾರ , ಜೂಲೈ 2, 2020
24 °C

ಗೋಕರ್ಣ: ಸ್ಥಳೀಯರಿಗೆ ಮಾತ್ರ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕರ್ಣ: ಸರ್ಕಾರದ ಆದೇಶದಂತೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. 15 ದಿನ ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕಡ್ಡಾಯವಾಗಿ ಮುಖಗವಸು‌ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನದ ಆಡಳಿತಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.

ಗರ್ಭಗುಡಿಗೆ ಪ್ರವೇಶವಿಲ್ಲ: ಸ್ಥಳೀಯರಿಗೂ ನಂದಿಗೃಹದವರೆಗೆ ಮಾತ್ರ ಹೋಗಲು ಅವಕಾಶವಿದ್ದು, ಅಲ್ಲಿಂದಲೇ ನಿಂತು ದರ್ಶನ ಪಡೆಯಬೇಕು ಎಂದು ತಿಳಿಸಿದ್ದಾರೆ. ಸರ್ಕಾರದ ಸೂಚನೆಯಂತೆ ತೀರ್ಥ ಮತ್ತು ಪ್ರಸಾದ ವಿತರಣೆ ಇರುವುದಿಲ್ಲ ಎಂದು ಜಿ.ಕೆ.ಹೆಗಡೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು