ಶುಕ್ರವಾರ, ಆಗಸ್ಟ್ 6, 2021
23 °C

ಮೈಸೂರು | ಇಂದಿನಿಂದ ಅರಮನೆ ವೀಕ್ಷಣೆಗೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಅರಮನೆಯನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತಿದೆ.

ಸದ್ಯಕ್ಕೆ ವಾರದಲ್ಲಿ ಐದು ದಿನ ಮಾತ್ರ ತೆರೆಯಲು ನಿರ್ಧರಿಸಲಾಗಿದೆ. ಶನಿವಾರ ಹಾಗೂ ಭಾನುವಾರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. ಧ್ವನಿಬೆಳಕು, ವಿದ್ಯುತ್‌ ಅಲಂಕಾರವೂ ಇರುವುದಿಲ್ಲ.

‘ಅರಮನೆಯು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ತೆರೆದಿರಲಿದ್ದು, ದಿನಕ್ಕೆ 3,500 ಜನರಿಗೆ ಮಾತ್ರ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಗಂಟೆಗೆ 350 ಜನರನ್ನು ಒಳಬಿಡಲಾಗುವುದು’ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.