‘ಆಪರೇಷನ್ ಕಮಲ’ ಭೀತಿ: ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬುಧವಾರ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ನಲ್ಲಿ ಒತ್ತಡ ಹೆಚ್ಚಿದೆ. ಆಪರೇಷನ್ ಕಮಲದ ಭೀತಿಯಿಂದ ಎಚ್ಚೆತ ಕಾಂಗ್ರೆಸ್ ಹಿರಿಯ ನಾಯಕರು ಬುಧವಾರ ಪಕ್ಷದ ಕಚೇರಿಯಲ್ಲಿ ಸಭೆ ಸೇರಲಿದ್ದಾರೆ.
ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಿದ್ದರಾಮಯ್ಯ, ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್ ಮಲ್ಲಿಕಾರ್ಜುನ್ ಖರ್ಗೆ, ವೀರಪ್ಪ ಮೋಯ್ಲಿ, ಕೆ.ಹೆಚ್. ಮುನಿಯಪ್ಪ. ಡಿ.ಕೆ. ಶಿವಕುಮಾರ್, ಕೆ. ಜೆ. ಜಾರ್ಜ್ ಸೇರಿದಂತೆ ೧೫ ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಸಭೆಗೆ ಬರುವಂತೆ ಬುಲಾವ್ ಕಳುಹಿಸಲಾಗಿದೆ
ಆಪರೇಷನ್ ಕಮಲಕ್ಕೆ ಕೌಂಟರ್ ಸಂಪುಟ ವಿಸ್ತರಣೆ ಬಳಿಕ ಕೈಗೊಳ್ಳ ಬೇಕಾದ ಕ್ರಮ, ಅಸಮಾಧಾನಿತ ನಾಯಕರ ಬಂಡಾಯ ಶಮನ, ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಬೇಕಾದ ದೂರು ದುಮ್ಮಾನಗಳು, ಸರ್ಕಾರ ಹಾಗೂ ಪಕ್ಷದ ನಡುವಿನ ಸಮನ್ವಯ, ಅಧಿಕಾರಿಗಳ ವರ್ಗಾವಣೆ, ಬಡ್ತಿ ಮೀಸಲಾತಿ, ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಎದುರಿಸುವ ತಂತ್ರಗಾರಿಕೆ ಕುರಿತು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.