ಸೋಮವಾರ, ನವೆಂಬರ್ 18, 2019
25 °C

ರಾಷ್ಟ್ರಗೀತೆಗೆ ಅಗೌರವ: ಎಫ್‌ಐಆರ್

Published:
Updated:

ಬೆಂಗಳೂರು: ಓರಾಯನ್ ಮಾಲ್‌ನಲ್ಲಿರುವ ಪಿ.ವಿ.ಆರ್‌ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ್ದ ಕೆಲ ಪ್ರೇಕ್ಷಕರ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅ. 23ರಂದು ರಾತ್ರಿ ಅಸುರನ್ ಸಿನಿಮಾ ಪ್ರದರ್ಶನ ವೇಳೆ ರಾಷ್ಟ್ರಗೀತೆ ಪ್ರಸಾರವಾಗುತ್ತಿತ್ತು. ಕೆಲ ವೀಕ್ಷಕರು ಎದ್ದು ನಿಲ್ಲದೆ ಅಗೌರವ ತೋರಿದ್ದರು. ಅದನ್ನು ಪ್ರಶ್ನಿಸಿದ್ದ ಹಲವು ಪ‍್ರೇಕ್ಷಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. 

ವಿಡಿಯೊ ಆಧರಿಸಿ ಇನ್‌ಸ್ಪೆಕ್ಟರ್‌ ಎಂ. ಸದಾನಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪ್ರೇಕ್ಷಕರು ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.  

ಪ್ರತಿಕ್ರಿಯಿಸಿ (+)