ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎದೆನೋವು, ಕಿಡ್ನಿ ಸಮಸ್ಯೆ: ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

Last Updated 10 ಜೂನ್ 2020, 20:45 IST
ಅಕ್ಷರ ಗಾತ್ರ

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ನಗರದ ಕೊಡಿಯಾಲ್‌ಬೈಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ನಂತರ ಅವರನ್ನು ಇದೇ 8 ರಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

79 ವರ್ಷದ ಆಸ್ಕರ್‌ ಫರ್ನಾಂಡಿಸ್‌ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಜ್ಯಸಭಾ ಸದಸ್ಯರಾಗಿರುವ ಆಸ್ಕರ್ ಫರ್ನಾಂಡಿಸ್ ಅವರು ಲಾಕ್‌ಡೌನ್‌ಗಿಂತ ಮೊದಲು ದೆಹಲಿಯಲ್ಲಿದ್ದರು. ಲಾಕ್‌ಡೌನ್ ಘೋಷಣೆಯಾದಾಗ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT