ಬಂಡೀಪುರದಲ್ಲಿ ಮೇಲ್ಸೇತುವೆಗೆ ವಿರೋಧ: ಅರಣ್ಯ ಸಚಿವ ಆರ್.ಶಂಕರ್

7

ಬಂಡೀಪುರದಲ್ಲಿ ಮೇಲ್ಸೇತುವೆಗೆ ವಿರೋಧ: ಅರಣ್ಯ ಸಚಿವ ಆರ್.ಶಂಕರ್

Published:
Updated:
Deccan Herald

ಬೆಂಗಳೂರು: ಬಂಡೀಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 212ರಲ್ಲಿ ಐದು ಕಡೆ ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ವಿರೋಧ ಇದೆ ಎಂದು ಅರಣ್ಯ ಸಚಿವ ಆರ್‌.ಶಂಕರ್‌ ತಿಳಿಸಿದರು.

ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರಿಂದ ವಿಕಾಸಸೌಧದಲ್ಲಿ ಶುಕ್ರವಾರ ಮನವಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಪ್ರಾಣಿಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಲಿವೇಟೆಡ್‌ ಕಾರಿಡಾರ್‌ ಅಭಿವೃದ್ಧಿಪಡಿಸಿದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬಹುದು ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

‘ಬಂಡೀಪುರದಲ್ಲಿ ಕಾರಿಡಾರ್ ನಿರ್ಮಾಣ ಮಾಡುವುದಿಲ್ಲ ಹಾಗೂ ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗಾಗಲೇ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಸಹ ರಾಜ್ಯ ಸರ್ಕಾರ ಇದೇ ವಾದ ಮಂಡಿಸಲಿದೆ’ ಎಂದರು.

‘ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕಾರಿಡಾರ್‌ ನಿರ್ಮಾಣಕ್ಕೆ ಒತ್ತಡ ಹೇರುತ್ತಿವೆ. ಇದಕ್ಕೆ ರಾಜ್ಯ ಸರ್ಕಾರ ಮಣಿಯಬಾರದು’ ಎಂದು ವಾಟಾಳ್‌ ನಾಗರಾಜ್‌ ಒತ್ತಾಯಿಸಿದರು.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !