ಶನಿವಾರ, ಸೆಪ್ಟೆಂಬರ್ 18, 2021
21 °C

ನರೇಗಾ ಯೋಜನೆಯಡಿ ಈವರೆಗೆ ಒಂಬತ್ತು ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಾಜ್ಯದಲ್ಲಿ ನರೇಗಾ ಯೋಜನೆಯಡಿ ಈವರೆಗೆ ಒಂಬತ್ತು ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಜನ ಸ್ವಂತ ಊರುಗಳಿಗೆ ವಾಪಸ್ ಹೋಗುತ್ತಿರುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಲಾಕ್ಡೌನ್ ಸಡಿಲಿಕೆಯಿಂದಾಗಿ ಹೊರರಾಜ್ಯಗಳಿಂದ ಜನ ಬರುತ್ತಿರುವ ಕಾರಣ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ. ಸರ್ಕಾರ ಅಗತ್ಯ ಸೌಲಭ್ಯಗಳನ್ನೂ ಒದಗಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವ ಕಾರ್ಯ ಮಾಡುತ್ತಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಸ್ತರು ಶಿಸ್ತಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಸರ್ಕಾರದ ನಿಯಮ ಸರಿಯಾಗಿ ಪಾಲನೆಯಾಗುತ್ತಿದೆ. ಗ್ರಾಮೀಣ ಪ್ರದೇಶಗಳ ಜನರಿಂದ ನರೇಗಾ ಯೋಜನೆ ಯಶಸ್ವಿ ಪಡೆದುಕೊಳ್ಳುತ್ತಿದೆ ಎಂದರು.

ಸಭೆ: ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಜೊತೆ  ಈಶ್ವರಪ್ಪ ಸಭೆ ನಡೆಸುತ್ತಿದ್ದಾರೆ. ಜಿಲ್ಲಾ ಪಂಚಾಯತ್ ಸಿ.ಇ.ಒ ಬಿ.ಸಿ. ಸತೀಶ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು