ಸಂಕಷ್ಟದಲ್ಲಿರುವ ರೈತರಿಗೂ ಪರಿಹಾರ ನೀಡಲು ಚಿಂತನೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ‘ಸಂಕಷ್ಟದಲ್ಲಿರುವ ರೈತರಿಗೂ ಸರ್ಕಾರದ ಆರ್ಥಿಕ ಪರಿಸ್ಥಿತಿಯ ಇತಿಮಿತಿಯಲ್ಲಿ ಪರಿಹಾರ ನೀಡಲು ಚಿಂತನೆ ನಡೆಸಲಾಗಿದ್ದು, ಸದ್ಯವೇ ಪ್ರಕಟಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ರೈತ ಮುಖಂಡರೊಂದಿಗೆ ಗುರುವಾರ ಸಭೆ ನಡೆಸಿದ ವೇಳೆ ಅವರು ಈ ವಿಷಯ ತಿಳಿಸಿದರು.
‘ಲಾಕ್‌ಡೌನ್‌ನಿಂದ ಹಣ್ಣು, ತರಕಾರಿಗಳಿಗೆ ಬೇಡಿಕೆ ಕುಸಿದಿದೆ. ಸರ್ಕಾರಕ್ಕೆ ಇದೆಲ್ಲವನ್ನೂ ಗಮನಿಸಿ ಪರಿಹಾರ ನೀಡಬೇಕು’ ಎಂದು ರೈತ ಮುಖಂಡರು ಒತ್ತಾಯಿಸಿದರು. ಇದನ್ನೆಲ್ಲ ಪರಿಗಣಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.
‘ಲಾಕ್‌ಡೌನ್ ಅವಧಿಯಲ್ಲೂ ಕೃಷಿ ಮತ್ತು ಪೂರಕ ಚಟುವಟಿಕೆಗಳು ಯಾವುದೇ ಅಡಚಣೆ ಇಲ್ಲದೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ಪರಿಕರ ಮಾರಾಟ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.