ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರಿಸಿದ್ದರಲ್ಲಿ ತಪ್ಪಿಲ್ಲ: ಬಸವರಾಜ್ ಬೊಮ್ಮಾಯಿ

Last Updated 24 ಏಪ್ರಿಲ್ 2020, 8:32 IST
ಅಕ್ಷರ ಗಾತ್ರ

ಬೆಂಗಳೂರು: ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿದ್ದರಲ್ಲಿ ತಪ್ಪಾಗಿಲ್ಲ, ಯಾರದ್ದೂ ತಪ್ಪಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕೊರೋನಾ ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳು ಬರುತ್ತವೆ,‌ ಸಂದರ್ಭಕ್ಕೆ ತಕ್ಕಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಶಿಫ್ಟ್ ಮಾಡುತ್ತೇವೆ. ಇದಕ್ಕಾಗಿ ಎಲ್ಲಾ ಅಗತ್ಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಜೈಲು ಸಿಬ್ಬಂದಿಗೂ ಪರೀಕ್ಷೆ ಮಾಡಿ ಕ್ವಾರಂಟೈನ್‌ಗೂ ಒಳಪಡಿಸುತ್ತೇವೆ.ಇಲ್ಲೂ ಪೊಲೀಸರಿಗೆ ತಪಾಸಣೆ ಮಾಡಿ ಅಗತ್ಯಬಿದ್ದರೆಕ್ವಾರಂಟೈನ್ ಮಾಡ್ತೇವೆಎಂದು ಶುಕ್ರವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಯಾರು ಸಲಹೆ ಕೊಡ್ತಾರೆ ಅನ್ನೋದು‌ ಮುಖ್ಯ ಅಲ್ಲ ಆವತ್ತಿನ‌ ಸಂದರ್ಭದಲ್ಲಿ ಆರೋಪಿಗಳನ್ನು ಜೈಲಲ್ಲಿ ಇಡುವುದು ಉಚಿತವಾಗಿತ್ತು
ಏನೇ ಮಾಡಿದರೂ ಆಪಾದನೆ ಬಂದೇ ಬರುತ್ತದೆ.ಆರೋಪಿಗಳನ್ನು ಜೈಲಿನ ಬದಲು ಆಸ್ಪತ್ರೆಯಲ್ಲಿಟ್ಟಿದ್ದರೂಟೀಕೆ ಬರುತ್ತಿದ್ದವು.ಹೀಗೇ ಮಾಡಬೇಕು ಹಾಗೇ ಮಾಡಬೇಕು ಅಂತ ನೋಡುವ ಕಾಲ ಅಲ್ಲ ಇದು.ಸಂದರ್ಭ, ಸಮಯ‌ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.

ರಾಮನಗರದ ಜೈಲಿನಲ್ಲಿ ಆರೋಪಿಗಳಿಗೆ ಸೋಂಕು ಕಂಡು ಬಂದರೆ ಸ್ಥಳಾಂತರ ಮಾಡುತ್ತೇವೆಅಂತ ಮೊದಲೇ ನಾವು ಹೇಳಿದ್ವಿ.
ಇದನ್ನು ಕುಮಾರಸ್ವಾಮಿ ಅವರಿಗೂ ಹೇಳಿದ್ದೆವು. ರಾಮನಗರದ ಜೈಲಿನಲ್ಲಿರುವ ಎಲ್ಲರನ್ನೂ ಪರೀಕ್ಷೆ ಮಾಡುತ್ತೇವೆ.ರಾಮನಗರದ ಜನ ಹೆದರಬೇಕಿಲ್ಲಎಂದರು.

ರಾಮನಗರ ಜಿಲ್ಲೆಯ ಜನರು ಭಯಪಡುವ ಅಗತ್ಯಇಲ್ಲ.ಈಗಾಗಲೇ ಆ ಕೈದಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.ಅವರಿಂದ ಸೋಂಕು ಹರಡದಂತೆ ಕ್ರಮ ವಹಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.ಹೀಗಾಗಿ ಯಾರೂ ಭಯ ಪಡಬೇಡಿ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT