ಶನಿವಾರ, ಮಾರ್ಚ್ 28, 2020
19 °C
ಟಿವಿ ನೋಡಿ ನೋಡಿ ಈ ರೀತಿ ಆಗಿದ್ದಾನೆ: ಪೋಷಕರ ಹೇಳಿಕೆ

ಕುಂದಾಪುರ ತಾಲೂಕು ಕಚೇರಿ ಆವರಣದಲ್ಲಿ ಪಾಕ್ ಪರ ಘೋಷಣೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕುಂದಾಪುರ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್‌, ಜಿಹಾದ್‌ ಜಿಂದಾಬಾದ್‌ ಘೋಷಣೆ ಕೂಗಿದ ರಾಘವೇಂದ್ರ ಎಂಬಾತನ ವಿರುದ್ಧ ಪೊಲೀಸರು ಸೆಕ್ಷನ್‌ 124 ಎ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ರಾಘವೇಂದ್ರ ಕುಂದಾಪುರದ ಕೋಡಿ ಮೂಲದ ವ್ಯಕ್ತಿ. ಸೋಮವಾರ ತಹಶೀಲ್ದಾರ್‌ ಕಚೇರಿಗೆ ಬಂದಿದ್ದ ಆತ ಏಕಾಏಕಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗುತ್ತಾ ಅಡ್ಡಾಡುತ್ತಿದ್ದ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ರಾಘವೇಂದ್ರನ್ನು ಎಳೆದೊಯ್ದರು.

ವಿಚಾರಣೆ ವೇಳೆ ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥ ಎಂಬ ಅಂಶ ತಿಳಿದುಬಂದಿದ್ದು, ಪೊಲೀಸರು ಪೂರ್ವಾಪರ ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತೊಂದೆಡೆ, ಪೋಷಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ರಾಘವೇಂದ್ರ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ. ಸೋಮವಾರ ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಮೂತ್ರ ಮಾಡುವುದಾಗಿ ಹೊರಗೆ ಹೋದವ ಮರಳಿ ಬರಲಿಲ್ಲ. ಬಳಿಕ ಮಾಧ್ಯಮಗಳಲ್ಲಿ ಮಗನ ಬಂಧನ ಸುದ್ದಿ ತಿಳಿಯಿತು' ಎಂದು ತಿಳಿಸಿದರು.

ಟಿವಿ ನೋಡಿ ಹೀಗಾದ:

ಈಚೆಗೆ ಟಿವಿಗಳಲ್ಲಿ ತೋರಿಸಲಾಗುತ್ತಿದ್ದ ಪಾಕಿಸ್ತಾನ ಪರ ಘೋಷಣೆ ಸುದ್ದಿಗಳನ್ನು ಹೆಚ್ಚಾಗಿ ನೋಡುತ್ತಿದ್ದ ರಾಘವೇಂದ್ರ ಪ್ರೇರೇಪಿತನಾಗಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಪೋಷಕರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು