ಭಾನುವಾರ, ಮೇ 31, 2020
27 °C

ಪಂಚಾಯಿತಿ ಚುನಾವಣೆ: ಅಭಿಪ್ರಾಯ ಕೇಳಿದ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸದ್ಯ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿ ರಾಜ್ಯ ಚುನಾವಣಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಪತ್ರ ರವಾನಿಸಿದೆ.

‘ಜಿಲ್ಲಾಡಳಿತ ಮತ್ತು ತಾಲ್ಲೂಕು ಕಚೇರಿ ಅಧಿಕಾರಿ, ಸಿಬ್ಬಂದಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವುದು ಆಯೋಗಕ್ಕೆ ತಿಳಿದಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದಾದರೆ ಮತದಾರರ ಪಟ್ಟಿ ತಯಾರಿಸಿ, ಹೊಸ ತಿದ್ದುಪಡಿಯಂತೆ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಬೇಕಾಗುತ್ತದೆ. ಇದೆಲ್ಲವನ್ನೂ ಶೀಘ್ರ ಮಾಡಲು ಸಾಧ್ಯವಾಗುತ್ತದೆಯೇ ಎಂದು ತಿಳಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

‘ಸರ್ಕಾರ ಈಚೆಗೆ ಮೀಸಲಾತಿಯನ್ನು ಹತ್ತು ವರ್ಷದ ಬದಲಿಗೆ ಐದು ವರ್ಷಕ್ಕೆ ‌ಇಳಿಸಿರುವುದರಿಂದ ಹೊಸದಾಗಿ ಆವರ್ತನೆ ಮೇಲೆ ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಲಾಗಿದ್ದು, ಕೊರೊನಾ ನಿಯಂತ್ರಣ ಕ್ರಮಗಳ ನಡುವೆಯೂ ಚುನಾವಣೆಗೆ ಸಿದ್ಧತೆ ನಡೆಸಲು ಸಾಧ್ಯವೇ ಎಂಬ ಉತ್ತರವನ್ನು ಬಯಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು