ಮಂಗಳವಾರ, ಮಾರ್ಚ್ 31, 2020
19 °C
ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ಕಾಯ್ದೆಗೆ ಮತ್ತೆ ತಿದ್ದುಪಡಿಗೆ ಸಿದ್ಧತೆ

ಪಂಚಾಯಿತಿ ಅಧ್ಯಕ್ಷರ ಅಧಿಕಾರ ಅವಧಿ ಕಡಿತ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ಕಾಯ್ದೆಗೆ ಮತ್ತೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಕ್ಕೆ ಕಡಿತಗೊಳಿಸುವುದು ಹಾಗೂ ಮೀಸಲಾತಿ ಸರದಿಯನ್ನು 10 ವರ್ಷಗಳ ಬದಲು ಐದು ವರ್ಷಗಳ ಅವಧಿಯ ಆಧಾರದಲ್ಲಿ ನಿಗದಿಪಡಿಸಲು ಸರ್ಕಾರ ಮುಂದಾಗಿದೆ.

ಸದ್ಯದಲ್ಲೇ ಪಂಚಾಯತ್‌ ರಾಜ್‌ ಸಂಸ್ಥೆಗಳ ಚುನಾವಣೆ ಬರಲಿದೆ. ಅಷ್ಟರೊಳಗೆ ಮೀಸಲಾತಿಗೆ ಸಂಬಂಧಿಸಿದಂತೆ ಕಾಯ್ದೆಯಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಸಲಹೆ ನೀಡಿತ್ತು. ಅದರಂತೆ ತಿದ್ದುಪಡಿ ತರಲಾಗುತ್ತಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಬಲಪಡಿಸಲು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೆ.ಆರ್‌.ರಮೇಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಆ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು 1993ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ಕಾಯ್ದೆಗೆ  2017ರಲ್ಲಿ ಸಮಗ್ರ ತಿದ್ದುಪಡಿ ತರಲಾಗಿತ್ತು.

ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧಿಕಾರದ ಅವಧಿಯನ್ನು 20 ತಿಂಗಳುಗಳಿಂದ 5 ವರ್ಷಗಳಿಗೆ ಹೆಚ್ಚಿಸಲಾಗಿತ್ತು. ಮೀಸಲಾತಿಯ ಸರದಿಯನ್ನು 10 ವರ್ಷಗಳಿಗೆ ಮುಂದುವರಿಸಲು ತೀರ್ಮಾನಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು