ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮೇಶ್ವರ್ ಖಾತೆ ಬದಲಿಸಿದ್ದು ಹೈಕಮಾಂಡ್‌: ಸಿದ್ದರಾಮಯ್ಯ

Last Updated 28 ಡಿಸೆಂಬರ್ 2018, 16:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪರಮೇಶ್ವರ್ ಹೊಂದಿದ್ದ ಗೃಹ ಖಾತೆಯನ್ನು ಬದಲಾವಣೆ ಮಾಡಿದ್ದು ಹೈಕಮಾಂಡ್‌ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ನಾವು ಏನೂ ಮಾಡಲು ಆಗುವುದಿಲ್ಲ. ಪರಮೇಶ್ವರ್‌ ಅವರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಮೊದಲು ಒತ್ತಾಯ ಮಾಡಿದ್ದೇ ನಾನು’ ಎಂದರು.

ದಲಿತ ಎನ್ನುವ ಕಾರಣಕ್ಕೆ ಪರಮೇಶ್ವರ್ ಅವರನ್ನು ಕಾಂಗ್ರೆಸ್‌ನಲ್ಲಿ ತುಳಿಯಲಾಗುತ್ತಿದೆ ಎಂದು ಎಚ್.ಡಿ. ರೇವಣ್ಣ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ‘ಒಹೋ...ರೇವಣ್ಣ ಹಂಗದ್ನ’ ಎಂದು ಅಚ್ಚರಿ ವ್ಯಕ್ತಪಡಿಸಿದರು. ರೇವಣ್ಣ ನನ್ನ ಬಗ್ಗೆ ಕೇಳಿದರೆ ಮಾತ್ರ ಪ್ರತಿಕ್ರಿಯಿಸುತ್ತೇನೆ’ ಎಂದರು.

‘ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಅವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಹೊರಟ್ಟಿ ನನ್ನನ್ನು ಪ್ರಶ್ನೆ ಮಾಡುವುದನ್ನು ಬಿಟ್ಟು ನೇರವಾಗಿ ಕುಮಾರಸ್ವಾಮಿ ಅವರನ್ನೇ ಪ್ರಶ್ನಿಸಲಿ. ಸಮನ್ವಯ ಸಮಿತಿಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ನಡೆದುಕೊಂಡಿದ್ದೇನೆ’ ಎಂದರು.

ಸಚಿವ ಸ್ಥಾನದಿಂದ ಕೈಬಿಟ್ಟ ಕಾರಣಕ್ಕೆ ರಮೇಶ್‌ ಜಾರಕಿಹೊಳಿ ಸ್ವಲ್ಪ ಬೇಸರಗೊಂಡಿದ್ದಾರೆ. ನನ್ನ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದ ಸಿದ್ದರಾಮಯ್ಯ ‘ರಮೇಶ್‌ ಪಕ್ಷ ತೊರೆಯುತ್ತಾರೆ ಎನ್ನುವುದು ಸುಳ್ಳು’ ಎಂದು ಸ್ಪಷ್ಟಪಡಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT