ಶುಕ್ರವಾರ, ಜೂಲೈ 3, 2020
22 °C

ಪೋಷಕರು ಆತಂಕದಲ್ಲಿದ್ದಾರೆ, ಇನ್ನೆರಡು ತಿಂಗಳು ಶಾಲೆ ಆರಂಭ ಬೇಡ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಟ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ಅವರು, ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಅಲ್ಲದೆ, ಇದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದು ಈ ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು