ಕರ್ನಾಟಕ ಲೋಕಸಭಾ ಕ್ಷೇತ್ರ ದರ್ಶನ–5

ಸೋಮವಾರ, ಮಾರ್ಚ್ 25, 2019
24 °C

ಕರ್ನಾಟಕ ಲೋಕಸಭಾ ಕ್ಷೇತ್ರ ದರ್ಶನ–5

Published:
Updated:

ಚಿತ್ರದುರ್ಗ ಲೋಕಸಭಾ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಗೆಲುವಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳಲ್ಲಿ ಲೆಕ್ಕಾಚಾರಗಳು ಶುರುವಾಗಿವೆ. 2009ರಿಂದ ಇದು ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಹೊಳಲ್ಕೆರೆ ಹಾಗೂ ಭರಮಸಾಗರ ವಿಧಾನಸಭಾ ಕ್ಷೇತ್ರಗಳು 2008ರ ಬಳಿಕ ಚಿತ್ರದುರ್ಗಕ್ಕೆ ಸೇರಿವೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ ಕೂಡ ಈ ಕ್ಷೇತ್ರದ ವ್ಯಾಪ್ತಿಯಲ್ಲಿವೆ.

ಮೀಸಲು ಕ್ಷೇತ್ರವಾದ ನಂತರ ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಒಂದು ಬಾರಿ ಗೆಲುವು ಸಾಧಿಸಿವೆ. ಸಂಸದ ಬಿ.ಎನ್‌.ಚಂದ್ರಪ್ಪ ಈ ಬಾರಿಯೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.

ಜೆಡಿಎಸ್‌–ಕಾಂಗ್ರೆಸ್‌ ನಡುವೆ ಮೈತ್ರಿ ಏರ್ಪಟ್ಟರೆ ಬಿಜೆಪಿಗೆ ಕಷ್ಟವಾಗುವ ಸಾಧ್ಯತೆ ಇದೆ. ಪಕ್ಷದ ಟಿಕೆಟ್‌ಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ.

ಹಾಸನ ಲೋಕಸಭಾ ಕ್ಷೇತ್ರ

ಕಾಂಗ್ರೆಸ್‌, ಜೆಡಿಎಸ್ ಮೈತ್ರಿಗೆ ಸವಾಲೆನಿಸಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಕಣಕ್ಕಿಳಿಯುತ್ತಾರೆ ಎಂಬುದೇ ಕುತೂಹಲದ ವಿಚಾರ. ದೇವೇಗೌಡರು 6ನೇ ಬಾರಿ ಹಾಸನದಿಂದ ಸ್ಪರ್ಧಿಸುವರೇ. ಕ್ಷೇತ್ರ ಬದಲಿಸುವರೇ. ಮೊಮ್ಮಗ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸುವುರೇ ಎನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕಿಲ್ಲ.

ಆದರೆ, ಈ ಹಿಂದಿನ ಎರಡು ಚುನಾವಣೆಗಳಲ್ಲಿ ‘ಕೊನೆ ಚುನಾವಣೆ’ ಎಂದೇ ಗೌಡರು ಮತಯಾಚಿಸಿ ಗೆದ್ದಿದ್ದನ್ನು ಜನ ಮರೆತಿಲ್ಲ. ಹೀಗಾಗಿ ಕೊನೆ ಕ್ಷಣದ ಬದಲಾವಣೆ ಎಂಬಂತೆ ಹಾಸನದಿಂದ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಕಳೆದ ಚುನಾವಣೆಯಲ್ಲಿ ಗೌಡರಿಗೆ ಪೈಪೋಟಿ ನೀಡಿದ್ದ ಎ.ಮಂಜು ಅವರನ್ನು ಸೆಳೆದು ಬಿಜೆಪಿ ಅಭ್ಯರ್ಥಿಯಾಗಿಸುವ ಯೋಚನೆಯೂ ಆ ಪಕ್ಷದಲ್ಲಿ ನಡೆದಿದೆ.

ರಾಯಚೂರು ಲೋಕಸಭಾ ಕ್ಷೇತ್ರ

 

ಬರಹ ಇಷ್ಟವಾಯಿತೆ?

 • 5

  Happy
 • 3

  Amused
 • 1

  Sad
 • 1

  Frustrated
 • 0

  Angry

Comments:

0 comments

Write the first review for this !