ಬುಧವಾರ, ಜೂನ್ 3, 2020
27 °C

ಪ್ರಯಾಣಿಕರ ಗಮನಕ್ಕೆ: ಈ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದವರು ತಪಾಸಣೆ ಮಾಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೋವಿಡ್-19 ಸೋಂಕಿತರು ಪ್ರಯಾಣಿಸಿದ್ದ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರು ಕೂಡಲೇ ತಪಾಸಣೆಗೆ ಒಳಗಾಗುವಂತೆ ಕೆಎಸ್‌ಆರ್‌ಟಿಸಿ ತಿಳಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿದ್ದು, ನಿಗಮದ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ - 19 ಸೋಂಕು ತಗುಲಿರುವುದು ದೃಢಪಟ್ಟಿದೆ. ದಿನಾಂಕ 18-03-2020 ರಂದು KA57F3802 ನಂಬರಿನ ರಾಜಹಂಸ ಬಸ್ಸು ಬೆಳಗ್ಗೆ 10ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆಗೆ ಹೊರಟಿರುತ್ತದೆ. ಈ ಬಸ್ಸಿನಲ್ಲಿ‌ ಪ್ರಯಾಣಿಸಿದ ಪ್ರಯಾಣಿಕರು ದಯವಿಟ್ಟು ಈ‌ ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಕೋರಲಾಗಿದೆ ಎಂದು ಹೇಳಿದೆ.

ನಂ. KA19 F3329 ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ 21-03-2020 ರಂದು ಸಂಜೆ 4.30ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟ ಬಸ್ ನಲ್ಲಿ ಪ್ರಯಾಣಿಸಿದ್ದವರು ದಯವಿಟ್ಟು ಈ‌ ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಕೋರಲಾಗಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು