ಪಾಟೀಲ– ಸಿದ್ದರಾಮಯ್ಯ ಚರ್ಚೆ

7

ಪಾಟೀಲ– ಸಿದ್ದರಾಮಯ್ಯ ಚರ್ಚೆ

Published:
Updated:

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿದ್ದ ಹಿರಿಯ ಶಾಸಕ ಎಂ.ಬಿ. ಪಾಟೀಲ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ಪಾಟೀಲ ಅವರಿಗೆ ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ಭರವಸೆ ನೀಡಿದೆ. ಈ ಮಧ್ಯೆ, ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಂಪುಟದಲ್ಲಿ ಅವಕಾಶ ನೀಡದ ಕಾರಣಕ್ಕೆ ತಮ್ಮ ನಿವಾಸದಲ್ಲಿ ಅತೃಪ್ತ ಶಾಸಕರ ಜೊತೆ ಸಭೆ ನಡೆಸಿದ್ದ ಪಾಟೀಲರು, ‘ನಾನು ಏಕಾಂಗಿ ಅಲ್ಲ, ಜೊತೆಯಲ್ಲಿ ಹಲವರಿದ್ದಾರೆ’ ಎಂದು ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ದರು. ಬಳಿಕ ದೆಹಲಿಗೆ ಕರೆಸಿಕೊಂಡು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‍ ಗಾಂಧಿ ಚರ್ಚೆ ನಡೆಸಿದ್ದರು.

ಸಿದ್ದರಾಮಯ್ಯ ಜೊತೆಗಿನ ರಾಜಕೀಯ ಚರ್ಚೆಯ ಕುರಿತು ವಿವರ ನೀಡಲು ನಿರಾಕರಿಸಿದ ಪಾಟೀಲ, ‘ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರ ಮನೆಗೆ ತೆರಳಿ ಭೇಟಿ ಮಾಡಿದ್ದೇನೆ. ಯಾವುದೇ ರಾಜಕೀಯ ವಿಷಯ ಚರ್ಚಿಸಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !