ಶನಿವಾರ, ಜುಲೈ 31, 2021
28 °C

ಗುತ್ತಿಗೆ ನೌಕರರಿಗೆ ಪೂರ್ಣ ವೇತನ: ರಾಜ್ಯ ಸರ್ಕಾರದ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯುತ್ತ ಸಂಸ್ಥೆ, ನಿಗಮ, ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರಿಗೆ ಲಾಕ್‌ಡೌನ್ ಅವಧಿಯ ವೇತನ ತಡೆಹಿಡಿಯುವಂತಿಲ್ಲ ಎಂದು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಎಚ್‌.ಎ.ಶೋಭಾ ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿತ್ತು. ಈ ಅವಧಿಯಲ್ಲಿ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಕೆಲವರಿಗೆ ನೌಕರರಿಗೆ ಕೆಲಸಕ್ಕೆ ಬರಲು ಸಾಧ್ಯವಾಗಿರಲಿಲ್ಲ.

ಇದೇ ಕಾರಣಕ್ಕೆ ಕೆಲವು ಇಲಾಖೆಗಳಲ್ಲಿ ಗೈರು ಹಾಜರಿ ಅವಧಿಯಲ್ಲಿ ವೇತನ ಪಾವತಿ ನಿರಾಕರಿಸಲಾಗಿತ್ತು. ಇದನ್ನು ಗಮನಿಸಿದ ರಾಜ್ಯ ಸರ್ಕಾರವು ಇದೀಗ ಸುತ್ತೋಲೆ ಹೊರಡಿಸಿ, 'ಕೇಂದ್ರ ಸರ್ಕಾರದ ಅಧಿಕೃತ ಜ್ಞಾಪನಾ ಪತ್ರದ ಪ್ರಕಾರ ವೇತನ ತಡೆ ಹಿಡಿಯದೇ ಪಾವತಿಸಬೇಕು' ಎಂದು ನಿರ್ದೇಶನ ನೀಡಿದೆ.

ರಾಜ್ಯದ ವಿವಿಧೆಡೆ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದನ್ನು ನೆನಪಿಸಿಕೊಳ್ಳಬಹುದು.


ಆರ್ಥಿಕ ಇಲಾಖೆಯ ನಿರ್ದೇಶನ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು