ಮಂಗಳವಾರ, ಅಕ್ಟೋಬರ್ 27, 2020
29 °C

ಪಿಡಿಒಗೆ ಜನನ, ಮರಣ ಪ್ರಮಾಣಪತ್ರ ವಿತರಣಾಧಿಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇನ್ನು ಮುಂದೆ ಜನನ, ಮರಣ ಪ್ರಮಾಣಪತ್ರಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿತರಿಸಲಿದ್ದಾರೆ. ಸಾರ್ವಜನಿಕರಿಗೆ ಜನನ, ಮರಣ ಪ್ರಮಾಣಪತ್ರಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಲಭವಾಗಿ ಸಿಗುವಂತಾಗಲು ಪಿಡಿಒಗಳನ್ನು ವಿತರಣಾ ಅಧಿಕಾರಿಗಳಾಗಿ ನೇಮಿಸಲು ಈಗಾಗಲೇ ಅನುಮತಿ ನೀಡಲಾಗಿದೆ.

ಪಿಡಿಒಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿ ಬರಲಿದ್ದು, ಈ ಬಗ್ಗೆ ಆದೇಶ ಹೊರಡಿಸುವಂತೆ ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್‌ ಅವರಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು